ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ತಮ್ಮ ಭಾಷಣದಲ್ಲಿ ಅವರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪದವಿ ಸಾಕಾಗುವುದಿಲ್ಲ. ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಪ್ರಾಂಶುಪಾಲ ಡಾ. ರವೀಂದ್ರ ತಿಳಿಸಿದರು.
ಪಟ್ಟಣದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂ.ಕಾಂ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ವಿದಾಯ ಸಮಾರಂಭದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯ ಕ್ಷೇತ್ರದ ಭವಿಷ್ಯದ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾತುಗಳನ್ನು ಹೇಳಿದರು.
ವಾಣಿಜ್ಯ ಕ್ಷೇತ್ರದಲ್ಲಿ ಬ್ಯಾಂಕಿಂಗ್, ಫೈನಾನ್ಸ್, ಅಕೌಂಟಿಂಗ್, ಡಿಜಿಟಲ್ ಮಾರ್ಕೆಟಿಂಗ್, ಡೇಟಾ ಅನಾಲಿಸಿಸ್ ಹಾಗೂ ಉದ್ಯಮಿತ್ವ ಕ್ಷೇತ್ರಗಳಲ್ಲಿ ಅಪಾರ ಅವಕಾಶಗಳಿದ್ದು, ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನ ಮತ್ತು ವೃತ್ತಿಪರ ಕೌಶಲ್ಯಗಳನ್ನು ಅಳವಡಿಸಿಕೊಂಡರೆ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬಹುದು ಎಂದು ಹೇಳಿದರು.
Also read: ಬೀರೂರು – ತಾಳಗುಪ್ಪ ರೈಲ್ವೆ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ | ಇಲ್ಲಿದೆ ಡೀಟೇಲ್ಸ್
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಪ್ರಕಾಶ್ ಉಪಾಧ್ಯ, ಬಾಲಾಜಿ, ಶರತ್ ಹಾಗೂ ಸಿಂಧು ಉಪಸ್ಥಿತರಿದ್ದು ಅವರು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನು ಹಾಗೂ ಮುಂದಿನ ಜೀವನಕ್ಕೆ ಶುಭ ಸಂದೇಶವನ್ನು ನೀಡುವುದರ ಜೊತೆಗೆ ಕಾರ್ಯಕ್ರಮಕ್ಕೆ ಮೆರುಗು ತಂದರು.
ಕಾರ್ಯಕ್ರಮವನ್ನು ಎಂ.ಕಾಂ ವಿದ್ಯಾರ್ಥಿನಿ ಕು.ಸಮೀನಾ ಸ್ವಾಗತಿಸಿದರು. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿದ್ಯಾರ್ಥಿಗಳ ನೆನಪುಗಳ ಹಂಚಿಕೆ ಮತ್ತು ಶುಭಾಶಯ ಸಂದೇಶಗಳು ನಡೆಯಿತು. ಕಾರ್ಯಕ್ರಮವನ್ನು ಎಂ.ಕಾಂ ವಿದ್ಯಾರ್ಥಿನಿ ಸಿಂಧು ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















