ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು ರಾಜ್ಯಸಭಾ ಚುನಾವಣೆಯ ಘೋಷಣೆ ಬೆನ್ನಲ್ಲೇ ಕರ್ನಾಟಕ ವಿಧಾನಪರಿಷತ್ ಚುನಾವಣೆಯ Legislative Council election ದಿನಾಂಕ ಪ್ರಕಟವಾಗಿದೆ. ಜೂನ್ 26ರಂದು ತೆರವಾಗಲಿರುವ ಪರಿಷತ್‌ನ 7 ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದೆ.
ಕಾಂಗ್ರೆಸ್‌ನ 3, ಬಿಜೆಪಿ 3 ಮತ್ತು ಜೆಡಿಎಸ್‌ನ 1 ಸದಸ್ಯರ ಅವಧಿ ಜೂನ್‌ನಲ್ಲಿ ಮುಕ್ತಾಯವಾಗಲಿದೆ. ದಿನಾಂಕ ಘೋಷಣೆಯೊಂದಿಗೆ ಆಕಾಂಕ್ಷಿಗಳು ಚಟುವಟಿಕೆಯಲ್ಲಿ ತೊಡಗಿದ್ದು, ಸ್ಥಾನ ಗಿಟ್ಟಿಸಲು ಕಾರ್ಯತಂತ್ರ ಆರಂಭಿಸಿದ್ದಾರೆ.
ಚುನಾವಣಾ ವೇಳಾಪಟ್ಟಿ
ಅಧಿಸೂಚನೆ ಪ್ರಕಟಣೆ: ಜೂನ್ 01
ನಾಮಪತ್ರ ಸಲ್ಲಿಕೆ ಕೊನೆಯ ದಿನ: ಜೂನ್ 08
ನಾಮಪತ್ರ ಪರಿಶೀಲನೆ: ಜೂನ್ 09
ನಾಮಪತ್ರ ಹಿಂಪಡೆಯಲು ಕೊನೆಯ ದಿನ: ಜೂನ್ 11
ಮತದಾನ: ಜೂನ್ 18
ಫಲಿತಾಂಶ ಪ್ರಕಟಣೆ: ಜೂನ್ 18
ಅವಧಿ ಮುಕ್ತಾಯವಾಗಲಿರುವ ಸದಸ್ಯರು
ಬಿ.ಕೆ. ಹರಿಪ್ರಸಾದ್, ನಾಸೀರ್ ಅಹ್ಮದ್, ತಿಪ್ಪಣ್ಣ, ಪ್ರತಾಪ್ ಸಿಂಹ ನಾಯಕ್, ಎನ್. ನಾಗರಾಜು (ಎಂಟಿಬಿ), ಸುನಿಲ್ ವಲ್ಯಾಪುರ ಹಾಗೂ ಗೋವಿಂದರಾಜು ಅವರ ಅಧಿಕಾರಾವಧಿ ಜೂನ್‌ನಲ್ಲಿ ಅಂತ್ಯಗೊಳ್ಳಲಿದೆ.
Also read: ದುಬೈನಲ್ಲಿ ಭೀಕರ ರಸ್ತೆ ಅಪಘಾತ | ಕರಾವಳಿಯ ಭರತನಾಟ್ಯ ಶ್ರೀಲತಾ ತಂತ್ರಿ ನಿಧನ
ರಾಜಕೀಯ ಲೆಕ್ಕಾಚಾರ
ವಿಧಾನಸಭೆಯ ಹಾಲಿ ಬಲಾಬಲದ ಆಧಾರದ ಮೇಲೆ, ತೆರವಾಗಲಿರುವ 7 ಸ್ಥಾನಗಳ ಪೈಕಿ 5 ಸ್ಥಾನಗಳು ಕಾಂಗ್ರೆಸ್ ಪಾಲಾಗುವ ಸಾಧ್ಯತೆ ಇದೆ. ಉಳಿದ 2 ಸ್ಥಾನಗಳು ಬಿಜೆಪಿಗೆ ಸಿಗುವ ಸಾಧ್ಯತೆ ಇದೆ. ಈ ಮೂಲಕ ಕಾಂಗ್ರೆಸ್ 2 ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ನಿರೀಕ್ಷೆಯಿದ್ದು, ಬಿಜೆಪಿ ಮತ್ತು ಜೆಡಿಎಸ್ ತಲಾ 1 ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ.
ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಚರ್ಚೆಗೆ ಕಾರಣವಾಗಿದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















