ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಕುರ್ಚಿ ಬದಲಾವಣೆ ಚರ್ಚೆಯ ಮಧ್ಯೆ ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿಎಂ ಸಿದ್ದರಾಮಯ್ಯ CM Siddaramaiah ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.
ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು ಬೆಳಗ್ಗೆ ಆಯೋಜಿಸಿದ್ದ ಉಪಹಾರ ಸಭೆಯಲ್ಲಿ ತಾವು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದಾಗಿ ಸಚಿವರಿಗೆ ತಿಳಿಸಿದರು. ಅಲ್ಲದೆ, ತಮ್ಮ ಉತ್ತರಾಧಿಕಾರಿಯ ಕುರಿತು ಅಂತಿಮ ತೀರ್ಮಾನವನ್ನು ಪಕ್ಷದ ನಾಯಕತ್ವವೇ ಕೈಗೊಳ್ಳಲಿದೆ ಎಂದು ಹೇಳಿದರು.
ಇದೇ ವೇಳೆ, ಇಂದು ಮಧ್ಯಾಹ್ನ 3.30 ಬಳಿಕ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಬೆಳಗ್ಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳ ಮುಂದೆ ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದರು. ಇದರಿಂದ ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಗೆ ಅಧಿಕೃತವಾಗಿ ವೇದಿಕೆ ಸಿದ್ಧವಾದಂತಾಗಿದೆ.
ಸಿದ್ದರಾಮಯ್ಯ ಅವರು ಇಂದು ತಡರಾತ್ರಿ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖರನ್ನು ಭೇಟಿಯಾಗುವ ನಿರೀಕ್ಷೆಯಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















