ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ರಾಜಕೀಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿದ್ದ ಸಿಎಂ Chief Minister ಕುರ್ಚಿ ಕದನಕ್ಕೆ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ Siddaramaiah ರಾಜೀನಾಮೆ ನೀಡಿದ್ದಾರೆ.
ಇಂದು ಮಧ್ಯಾಹ್ನ ಲೋಕಭವನಕ್ಕೆ ಆಗಮಿಸಿದ ಅವರು, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.
ರಾಜ್ಯಪಾಲರು Governor ಇಂದೋರ್ ಗೆ ತೆರಳಿರುವ ಕಾರಣ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು.
Also read: ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಸಿಎಂ ಸಿದ್ದರಾಮಯ್ಯ
ಸದ್ಯಕ್ಕೆ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಲಿದೆ.
ಈ ಮೂಲಕ ಐದು ದಶಕಗಳ ಸುದೀರ್ಘ ರಾಜಕೀಯ ಚರಿತ್ರೆಯ ದಣಿವರಿಯದ ಹೋರಾಟಗಾರ, ಸಮಾಜವಾದಿ ಸಿದ್ದರಾಮಯ್ಯ ಅವರ ಎರಡನೇ ಅವಧಿಯ ಮೂರು ವರ್ಷಗಳ ಮುಖ್ಯಮಂತ್ರಿ ಆಡಳಿತ ಅಂತ್ಯ ಕಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















