ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹೊಸನಗರ ತಾ. ನಿಟ್ಟೂರು ಸಮೀಪದ ತಟ್ಟೆಕೊಡ್ಲು ಎಂಬಲ್ಲಿ ನಡೆದಿದೆ.
ತಟ್ಟೆಕೊಡ್ಲು ರಾಮಚಂದ್ರ ರಾವ್ (85) ಸಾವನ್ನಪ್ಪಿರುವ ವ್ಯಕ್ತಿ ಎನ್ನಲಾಗಿದೆ.. ಮಧ್ಯರಾತ್ರಿ 1:30ರ ಸುಮಾರಿಗೆ ಸಿಂಗಲ್ ಬ್ಯಾರಲ್ ಗನ್ ನಿಂದ ಕುತ್ತಿಗೆ ಸಮೀಪ ಶೂಟ್ ಮಾಡಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂರು ದಿನಗಳ ಹಿಂದೆ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದ ರಾಮಚಂದ್ರರಾವ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ತೀವ್ರ ತಲೆ ನೋವಿನಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















