No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

kalpa News by kalpa News
June 1, 2026
in ಚಾಮರಾಜನಗರ
1
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಚಾಮರಾಜನಗರ |

ಕನ್ನಡ ಚಲನಚಿತ್ರ ರಂಗದಲ್ಲಿ ತಮ್ಮ ವಿಶೇಷ ನಟನೆ, ಗತ್ತು, ನೇರನುಡಿ ಹಾಗೂ ಕಲಾವಿದರ ಸಂಕಷ್ಟಗಳಿಗೆ ಸದಾ ಕಾಲ ಸಹಾಯನೀಡಿ ಕಲಿಯುಗದ ಕರ್ಣ ಎಂದೇ ಪ್ರಸಿದ್ಧರಾದ ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್ ರವರನ್ನು ನೆನೆಯುವುದು ಕನ್ನಡಿಗರ ಕರ್ತವ್ಯವೆಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರು ಹಾಗೂ ಉಪನ್ಯಾಸಕರಾದ ಸುರೇಶ್ ಎನ್ ಋಗ್ವೇದಿ ಅಭಿಪ್ರಾಯಪಟ್ಟರು.

ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಕನ್ನಡ ಚಲನಚಿತ್ರರಂಗಕ್ಕೆ ಅಂಬರೀಷ್ ರವರ ಕೊಡುಗೆಗಳು ಕುರಿತು ಮಾತನಾಡಿದರು.
ಮಳವಳ್ಳಿ ಹುಚ್ಚೇಗೌಡ ಅಮರನಾಥ್ ಕನ್ನಡ ಚಿತ್ರರಂಗಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ Rebelstar Ambarish ಆಗಿ ಕರ್ನಾಟಕದ ಕರ್ಣನಾಗಿ ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ಸದಾ ಕಾಲ ಉಳಿದಿದ್ದಾರೆ. ಪ್ರೀತಿ, ವಿಶ್ವಾಸ, ಸ್ನೇಹ, ಸಹಾಯ ಹಸ್ತಕ್ಕೆ ಅಂಬರೀಶ್ ರವರೇ ಸಾಟಿ. ಅಂಬರೀಶ್ ರವರು ಕನ್ನಡ ಚಲನಚಿತ್ರರಂಗದ ತ್ರಿಮೂರ್ತಿಗಳಲ್ಲಿ ಒಬ್ಬರು. ಡಾ.ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್ ಹಲವು ದಶಕಗಳ ಕಾಲ ಕನ್ನಡ ಚಿತ್ರರಂಗವನ್ನು ಜಗತ್ತಿಗೆ ತಿಳಿಸಿ ತಮ್ಮ ನಟನೆ ಹಾಗೂ ಮಾನವೀಯ ಮೌಲ್ಯ ಕಾರ್ಯದ ಮೂಲಕ ಜನಪ್ರಿಯರಾದವರು.

Also read: ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

ಕಲಾವಿದರಾಗಿ ನಂತರ ರಾಜಕಾರಣಕ್ಕೆ ಪ್ರವೇಶಿಸಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿ ರಾಜ್ಯ ಸಚಿವರಾಗಿ ಅಪಾರ ಸೇವೆ ಸಲ್ಲಿಸಿದ ಅಂಬರೀಶ್ ರವರು ಪುಟ್ಟಣ್ಣ ಕಣಗಾಲ್ ರವರ ನಾಗರಹಾವು ಚಿತ್ರದ ಮೂಲಕ ತಮ್ಮ ನಟನೆಯ ಮೂಲಕ ಜನಪ್ರಿಯಗೊಂಡವರು. ಚಕ್ರವ್ಯೂಹ, ಮಸಣದ ಹೂವು, ಅಂತ, ಒಲವಿನ ಉಡುಗೊರೆ, ಹೃದಯ ಹಾಡಿತು ಚಲನಚಿತ್ರಗಳು ಅಪಾರ ಜನಪ್ರಿಯತೆಯನ್ನು ತಂದು ಕೊಟ್ಟಿತು. ಮಂಡ್ಯದ ಗಂಡು ಅಂಬರೀಶ್ ಎಂದೆ ಜಗತ್ತಿಗೆ ಪರಿಚಿತರಾದ ಇವರು ತಮ್ಮ ವಿಶೇಷವಾದ ಗತ್ತು, ನೇರ ನುಡಿ ಹಾಗೂ ಸ್ಪಂದನೆಯ ಮೂಲಕ ಪ್ರತಿಯೊಬ್ಬರಿಗೂ ಹತ್ತಿರವಾದವರು. ಇವರಿಂದ ಮುಖಸ್ತುತಿ ಮಾಡಿಸಿಕೊಳ್ಳುವುದೇ ಅಭಿಮಾನಿಗಳಿಗೆ ಬಹಳ ಖುಷಿ ಕೊಡುತ್ತಿತ್ತು. ಜಾತಿ, ಮತ, ಧರ್ಮ ನೋಡದೆ ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಅವರ ಹೃದಯ ಶ್ರೀಮಂತಿಕೆ ಮರೆಯಲಾಗದು. ರಾಜ್ಯ ಪ್ರಶಸ್ತಿ ಮತ್ತು ಗೌರವ ಡಾಕ್ಟರೇಟ್ ಪದವಿಗಳನ್ನು ಪಡೆದು ಉತ್ತುಂಗದಲ್ಲಿದ್ದರು ತಮ್ಮ ವಿಶೇಷ ನಡೆಯ ಮೂಲಕ ಸದಾ ಕಾಲ ಜನರ ಭಾವನೆಗಳಲ್ಲಿ ಬದುಕುತ್ತಿರುವ ಅಂಬರೀಶ್ ರವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ನೂರಾರು ಕಲಾವಿದರಿಗೆ ಸಹಾಯ ಮಾಡಿರುವ ಅಂಬರೀಶ್ ರವರು ಶಾಶ್ವತವಾಗಿ ಕನ್ನಡಿಗರ ಮನಸ್ಸಿನಲ್ಲಿ ಉಳಿದಿದ್ದಾರೆ ಎಂದು ಋಗ್ವೇದಿ ವಿವರಿಸಿದರು.

ಅಂಬರೀಶ್ ರವರ ಕುರಿತು ಮುಖಂಡ ಹಾಗೂ ಜನಪದ ಕಲಾವಿದ ರವಿಚಂದ್ರ ಪ್ರಸಾದ್ ಕಹಳೆ ಮಾತನಾಡಿ ಅಂಬರೀಶ್‍ರವರ ಜೊತೆ ಓಡಾಡುವ ಅವಕಾಶ ನಮಗೆ ದೊರಕಿದ್ದು ವಿಶೇಷ. ಚಾಮರಾಜನಗರಕ್ಕೆ ಅವರನ್ನು ಕರೆತಂದು ಕನ್ನಡ ಸಂಘಟನೆಗಳು ಬೆಳ್ಳಿ ಕಿರೀಟ ಧಾರಣೆ ಮಾಡಿ ಸಾವಿರಾರು ಜನರ ಸಮ್ಮುಖದಲ್ಲಿ ನಾಗರಿಕ ಸನ್ಮಾನವನ್ನು ಮಾಡುವ ಮೂಲಕ ಚಾಮರಾಜನಗರ ಜನತೆ ಅವರಿಗೆ ಗೌರವವನ್ನು ಸಲ್ಲಿಸಿತ್ತು.ಅಂದು ಇಡೀ ನಗರ ಜನಸಾಗರದಲ್ಲಿ ಅಭಿಮಾನದ ಮುತ್ತುಗಳನ್ನು ನೀಡಿ ಆನಂದವನ್ನು ಕಂಡ ಕ್ಷಣ ಮರೆಯಲಾಗದು. ಅಂಬರೀಶ್ ರವರ ವ್ಯಕ್ತಿತ್ವ ಸ್ನೇಹಮಯವಾದದ್ದು. ವಿಷ್ಣುವರ್ಧನ್ ಮತ್ತು ಅಂಬರೀಶ್ ಅತ್ಯಂತ ಪ್ರಿಯವಾದ ಗೆಳೆಯರಾಗಿದ್ದರು. ವೃತ್ತಿಯಲ್ಲಿ ದ್ವೇಷ ಭಾವನೆ ತುಂಬಿರುವ ಕಾಲಘಟ್ಟದಲ್ಲಿ ವಿಷ್ಣುವರ್ಧನ್ ಮತ್ತು ಅಂಬರೀಶ್ ರವರ ಸ್ನೇಹ ಕಲಾವಿದರಿಗೆ ಮಾದರಿಯಾದ ಸ್ನೇಹ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಹಾಗೂ ಮುಖಂಡರು ಆದ ಶ್ರೀಮತಿ ಪದ್ಮ ಪುರುಷೋತ್ತಮ್ ಮಾತನಾಡಿ ಚಿತ್ರರಂಗದ ಮೂಲಕ ಜನರ ಹತ್ತಿರವಾದ ಅಂಬರೀಶ್ ಜನರಿಗೆ ಸದಾ ಕಾಲ ಸಹಾಯವನ್ನು ಮಾಡಿದವರು.ಅಂಬರೀಶ್ ರವರನ್ನು ಕನ್ನಡ ಸಾಹಿತ್ಯ ಪರಿಷತ್ತು ಅವರ ಕೊಡುಗೆಗಳ ಕುರಿತು ಕಾರ್ಯಕ್ರಮ ರೂಪಿಸಿರುವುದು ಬಹಳ ಉತ್ತಮವಾದದ್ದು. ಸಾಹಿತ್ಯ ಬೆಳವಣಿಗೆಗೆ ಚಿತ್ರರಂಗವು ಕಾರಣವಾಗಿದೆ ಎಂದು ತಿಳಿಸಿದರು.

ಗಾಯಕ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯ ಶಿವಲಿಂಗ ಮೂರ್ತಿರವರು ಅಂಬರೀಶ್ ರವರ ಚಲನಚಿತ್ರದ ಗೀತೆಗಳನ್ನು ಹಾಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸರಸ್ವತಿ,ಬಿಕೆ ಆರಾಧ್ಯ, ನವೀನ್,ಸುರೇಶ್ ದೊಡ್ಡ ಮೋಳೆ, ಧನಂಜಯ ಕುಮಾರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRebelstar Ambarishಚಾಮರಾಜನಗರರೆಬೆಲ್ ಸ್ಟಾರ್ ಅಂಬರೀಶ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

Next Post

Regulation, Diversion and Rescheduling of Trains in the Solapur–Wadi Section

kalpa News

kalpa News

Next Post
south-western-railway-parakanahatti-trains-halt-extend

Regulation, Diversion and Rescheduling of Trains in the Solapur–Wadi Section

Comments 1

  1. Pingback: ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ » kalpa.news

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL