ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಬಿ.ಹೆಚ್. ರಸ್ತೆ B H Road ಸಮೀಪದ ಗುಜರಿ ಕ್ರಾಸ್ ಹಾಗೂ ಅದರ ಸುತ್ತಮುತ್ತಲಿನ ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕ ವಾಹನಗಳ ಸುಗಮ ಸಂಚಾರ ಮತ್ತು ಪಾದಚಾರಿಗಳ ಸುರಕ್ಷಿತ ಸಂಚಾರಕ್ಕೆ ಅಡಚಣೆಯಾಗುವ ರೀತಿಯಲ್ಲಿ ಇಡಲಾಗಿದ್ದ ಕಬ್ಬಿಣದ ವಸ್ತುಗಳು, ಟೈರ್‌ಗಳು ಹಾಗೂ ಇತರೆ ಗುಜರಿ ಸಾಮಗ್ರಿಗಳನ್ನು ಇಂದು ತೆರವುಗೊಳಿಸಲಾಯಿತು.
ಈ ಸಂದರ್ಭದಲ್ಲಿ, ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದ ಗುಜರಿ ಅಂಗಡಿ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಮುಂದೆಯೂ ಯಾವುದೇ ರೀತಿಯ ವಸ್ತುಗಳನ್ನು ಫುಟ್‌ಪಾತ್ ಅಥವಾ ರಸ್ತೆಗಳ ಮೇಲೆ ಇಡಬಾರದು ಎಂದು ತಿಳಿಸಲಾಯಿತು.
ಈ ಪ್ರದೇಶದಲ್ಲಿ ವ್ಯಾಪಾರಿಗಳು ಕಬ್ಬಿಣದ ವಸ್ತುಗಳು, ಟೈರ್‌ಗಳು ಹಾಗೂ ಇತರೆ ಗುಜರಿ ಸಾಮಗ್ರಿಗಳನ್ನು ರಸ್ತೆ ಮತ್ತು ಪಾದಚಾರಿ ಮಾರ್ಗಗಳ ಮೇಲೆ ಇಟ್ಟಿದ್ದರಿಂದ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸರು ಕ್ರಮ ಕೈಗೊಂಡು ಅವುಗಳನ್ನು ತೆರವುಗೊಳಿಸಿದರು.
ಇದೇ ವೇಳೆ, ಮುಂದಿನ ದಿನಗಳಲ್ಲಿ ಈ ನಿಯಮವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















