ಕಲ್ಪ ಮೀಡಿಯಾ ಹೌಸ್ | ಸೂರತ್ |
ಗುಜರಾತ್‌ನ ಸೂರತ್ ಜಿಲ್ಲೆಯ ಬಾರ್ಡೋಲಿ ತಾಲ್ಲೂಕಿನ ಉವಾ ಗ್ರಾಮದ ಸಮೀಪ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ Bus Accident ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, 7 People burnt alive 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಎರಡು ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯೇ ಈ ದುರ್ಘಟನೆಗೆ ಕಾರಣವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಏಕಾಏಕಿ ಪಲ್ಟಿಯಾದ ಪರಿಣಾಮ, ಅದನ್ನು ತಪ್ಪಿಸಲು ಯತ್ನಿಸಿದ ಬಸ್ ಚಾಲಕ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಈ ವೇಳೆ ಬಸ್ ರಸ್ತೆ ವಿಭಜಕ ದಾಟಿ ಎದುರು ಬರುತ್ತಿದ್ದ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ಪರಿಣಾಮವಾಗಿ ಒಂದು ಬಸ್ ಪಲ್ಟಿಯಾಗಿದ್ದು, ಅದು ಸಿಎನ್‌ಜಿ ಚಾಲಿತವಾಗಿದ್ದರಿಂದ ಗ್ಯಾಸ್ ಸೋರಿಕೆ ಉಂಟಾಗಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್ಸನ್ನು ಆವರಿಸಿದ್ದು, ಹಲವರು ಹೊರಬರಲಾರದೆ ಸಿಲುಕಿಕೊಂಡಿದ್ದಾರೆ. ಕೆಲ ಪ್ರಯಾಣಿಕರು ಕಿಟಕಿಗಳ ಮೂಲಕ ಜಿಗಿದು ಪ್ರಾಣ ಉಳಿಸಿಕೊಂಡರೆ, ಇನ್ನು ಕೆಲವರು ಗಂಭೀರವಾಗಿ ಸುಟ್ಟಿದ್ದಾರೆ.
Also read: ಶಿವಮೊಗ್ಗ | ರಸ್ತೆಗೆ ಅಡ್ಡವಾಗಿದ್ದ ಗುಜರಿ ಅಂಗಡಿಗಳ ತೆರವು | ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?
ಘಟನೆ ತಿಳಿದ ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದು, ನಂತರ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸೂರತ್‌ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಈ ಅಪಘಾತದಿಂದ ಹೆದ್ದಾರಿಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದ್ದು, ಪೊಲೀಸರು ವಾಹನ ಸಂಚಾರವನ್ನು ಪರ್ಯಾಯ ಮಾರ್ಗಗಳಿಗೆ ತಿರುಗಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಆರಂಭಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















