ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದ್ದು, ಇದಕ್ಕೂ ಮುನ್ನ ಮಾಜಿ ಪ್ರಧಾನಿ ಹಾಗೂ ಮಾಜಿ ಸಿಎಂ ನಿವಾಸಕ್ಕೆ ಭೇಟಿ ನೀಡಿದರು.
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಶಿವಕುಮಾರ್, ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಿದರು.
Also Read>> Tragic Accident in Gujarat | Head-on Collision Between Two MSRTC Buses | 7 Burnt Alive
ದೇವೇಗೌಡರಿಗೆ ನಮಸ್ಕರಿಸಿ, ಕಾಲು ಮುಟ್ಟಿ ಆಶೀರ್ವಾದ ಪಡೆದ ಶಿವಕುಮಾರ್, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾರ್ಗದರ್ಶನ ನೀಡುವಂತೆ ಕೋರಿದರು.
ಈ ಕುರಿತಂತೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಡಿ.ಕೆ. ಶಿವಕುಮಾರ್, ಇಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ, ಇಂದು ಸಂಜೆ ಲೋಕಭವನದಲ್ಲಿ ನಡೆಯಲಿರುವ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಅವರಿಗೆ ಹೃತ್ಪೂರ್ವಕ ಆಹ್ವಾನ ನೀಡಿದೆ. ಹಿರಿಯ ನಾಯಕರ ವ್ಯಾಪಕ ರಾಜಕೀಯ ಅನುಭವ ಮತ್ತು ಮಾರ್ಗದರ್ಶನವು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಯಾವಾಗಲೂ ಸ್ಫೂರ್ತಿ ನೀಡುತ್ತದೆ ಎಂದರು.
ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಲೋಕಭವನದಲ್ಲಿ ನಡೆಯುವ ಪ್ರಮಾಣವಚನ ಸಮಾರಂಭಕ್ಕೆ ವಿನಮ್ರವಾಗಿ ಆಹ್ವಾನಿಸಿದೆ. ಕರ್ನಾಟಕದ ಪ್ರಗತಿ ಮತ್ತು ನಮ್ಮ ಜನರ ಕಲ್ಯಾಣಕ್ಕಾಗಿ ನಾವು ಕೆಲಸ ಮಾಡುತ್ತಿರುವಾಗ ಹಿರಿಯ ನಾಯಕರ ಅನುಭವ ಮತ್ತು ಮಾರ್ಗದರ್ಶನಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.
Also Read>> ದೆಹಲಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ | 21 ಸಾವು | ಪ್ರಾಣ ಉಳಿಸಿಕೊಳ್ಳಲು ಮಹಡಿಯಿಂದ ಜಿಗಿದ ಮಹಿಳೆಯರು
ನಂತರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಶಿವಕುಮಾರ್, ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಿದರು.
ಹಿರಿಯ ನಾಯಕರ ಅನುಭವ ಮತ್ತು ಮಾರ್ಗದರ್ಶನವು ರಾಜ್ಯದ ಅಭಿವೃದ್ಧಿಗೆ ಮಾರ್ಗದರ್ಶಕ ಬೆಳಕಾಗಿ ಕಾರ್ಯನಿರ್ವಹಿಸುತ್ತದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತಂತೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ, ಲೋಕಭವನದಲ್ಲಿ ನಡೆಯುವ ಪ್ರಮಾಣವಚನ ಸಮಾರಂಭಕ್ಕೆ ಅವರನ್ನು ಆತ್ಮೀಯವಾಗಿ ಆಹ್ವಾನಿಸಿದೆ ಎಂದಿದ್ದಾರೆ.
ಕರ್ನಾಟಕದ ಪ್ರಗತಿ ಮತ್ತು ನಮ್ಮ ಜನರ ಕಲ್ಯಾಣಕ್ಕಾಗಿ ನಾವು ಕೆಲಸ ಮಾಡುವಾಗ ಹಿರಿಯ ನಾಯಕರ ಅನುಭವ ಮತ್ತು ಮಾರ್ಗದರ್ಶನವನ್ನು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್



















