ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ CM D K Shivakumar ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ DCM G Parameshwar ಪ್ರಮಾಣ ವಚನ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ 12 ಜನ ಸಂಪುಟ ದರ್ಜೆ ಸಚಿವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ Governor Thawarchand Gehlot ಅವರು ಪ್ರಮಾಣ ವಚನ ಬೋಧಿಸಿದರು.

Also read: ಅಂದು ಸಮಸ್ಯೆ… ಇಂದು ಪರಿಹಾರ! ಅಭಿವೃದ್ಧಿಯ ಪಥದಲ್ಲಿ ಬೀದರ್ ದಕ್ಷಿಣ – ಜನರ ಕನಸುಗಳಿಗೆ ಶಾಶ್ವತ ಪರಿಹಾರ
ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೋಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯುಟಿ ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್ ಮತ್ತು ಶರಣ ಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಸಂವಿಧಾನವನ್ನು ಎತ್ತಿಹಿಡಿಯಲು ಮತ್ತು ಸಚಿವರಾಗಿ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ಎಲ್ಲಾ ಸಚಿವರು ಪ್ರತಿಜ್ಞೆ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















