ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜೆಡಿಎಸ್ ರಾಜ್ಯ ಕಾರ್ಯದರ್ಶಿ ಶಾರದಾ ಅಪ್ಪಾಜಿ Sharada Appaji ಅವರ ನೇತೃತ್ವದ ನಿಯೋಗವು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ H D Kumaraswamy ಅವರನ್ನು ಭೇಟಿ ಮಾಡಿ ವಿಐಎಸ್‌ಎಲ್ ಕಾರ್ಖಾನೆಯ VISL ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ ನಡೆಸಿತು.
ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಯೋಗದೊಂದಿಗೆ ಮಾತುಕತೆ ನಡೆಸಿದ ಸಚಿವರು, ಕಾರ್ಖಾನೆಯ ಅಭಿವೃದ್ಧಿಗೆ ಅಗತ್ಯವಿರುವ ಬಂಡವಾಳವನ್ನು ಜುಲೈ ಅಂತ್ಯದೊಳಗೆ ಒದಗಿಸುವ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, Steel Authority of India Limited (ಸೈಲ್) ಚೇರ್ಮನ್ ಡಾ. ಅಶೋಕ್ ಕುಮಾರ್ ಪಾಂಡ ಅವರು ಈಗಾಗಲೇ ಕಾರ್ಖಾನೆಗೆ ಭೇಟಿ ನೀಡಿ ಅಧಿಕಾರಿಗಳು ಹಾಗೂ ಕಾರ್ಮಿಕ ಸಂಘಗಳೊಂದಿಗೆ ಸಭೆ ನಡೆಸಿರುವುದಾಗಿ ತಿಳಿಸಿದ್ದಾರೆ. ಕಾರ್ಖಾನೆಯ ಆಧುನೀಕರಣಕ್ಕೆ ಬೇಕಾದ ಹೂಡಿಕೆಯನ್ನು ತರುವತ್ತ ಕ್ರಮ ಕೈಗೊಳ್ಳಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ನಿಯೋಗದಲ್ಲಿ ಜೆಡಿಎಸ್ ಮುಖಂಡ ಟಿ. ಚಂದ್ರೇಗೌಡ, ಮಹಿಳಾ ಘಟಕದ ಭಾಗ್ಯಮ್ಮ, ಕಾರ್ಮಿಕ ಸಂಘದ ಅಧ್ಯಕ್ಷ ಅಮೃತ್ ಕುಮಾರ್, ಉಪಾಧ್ಯಕ್ಷ ಮಲ್ಲಿಕಾರ್ಜುನ್ ಹಾಗೂ ಗುತ್ತಿಗೆ ಕಾರ್ಮಿಕರ ಸಂಘದ ರಾಕೇಶ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















