ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ–ಉಡುಪಿ ಗಡಿ ಭಾಗದ ಬಾಳೆಬರೇ ಘಾಟಿಯಲ್ಲಿ ಇಂದು ಶ್ರೀ ದುರ್ಗಾಂಬ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಕುಂದಾಪುರದ ಕಡೆಗೆ ಸಾಗುತ್ತಿದ್ದ ಈ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಮತ್ತು ಸಿಬ್ಬಂದಿ ಎಚ್ಚರಿಕೆ ವಹಿಸಿ, ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಇದರಿಂದ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕುಂದಾಪುರದ ಕಡೆಗೆ ತೆರಳುತ್ತಿದ್ದ ಶ್ರೀ ದುರ್ಗಾಂಬ ಬಸ್ ಚಂಡಿಕಾಂಬ ದೇವಸ್ಥಾನದ ಸಮೀಪ ನಿಗದಿತ ಸ್ಥಳದಲ್ಲಿ ನಿಂತಿತ್ತು. ಈ ವೇಳೆ ಸುಮಾರು 17 ಮಂದಿ ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಅಲ್ಲಿಂದ ಕುಂದಾಪುರದತ್ತ ಹೊರಟ ಕೆಲವೇ ಕ್ಷಣಗಳಲ್ಲಿ ಬಸ್ ಸೆನ್ಸಾರ್ ಬಾಕ್ಸ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















