ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರೌಡಿಶೀಟರ್ ನರಸಿಂಹ ಭೀಕರ ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈ ಪೈಕಿ ಮಹಜರು ನಡೆಸುವ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಮುಖ ಆರೋಪಿ, ರೌಡಿಶೀಟರ್ ಮಧು ಅಲಿಯಾಸ್ ಹನುಮಂತು ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
Also Read>> ಹಿರಿಯರ ಮಾರ್ಗದರ್ಶನದಿಂದಲೇ ಸುಸಂಸ್ಕೃತ ಸಮಾಜ ನಿರ್ಮಾಣ | ಸತ್ಯಾತ್ಮ ತೀರ್ಥಶ್ರೀ
ಜೂನ್ 12ರಂದು ನಡೆದಿತ್ತು ಭೀಕರ ಹತ್ಯೆ
ಗಾಂಧಿ ಬಜಾರ್‌ನ ಲಷ್ಕರ್ ಮೊಹಲ್ಲಾ ಬಳಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಜೂನ್ 12ರಂದು ಇಸ್ಪೀಟ್ ಆಟವಾಡಿಸುತ್ತಿದ್ದ ರೌಡಿಶೀಟರ್ ನರಸಿಂಹನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು ಅಂಬು ಅಲಿಯಾಸ್ ಅನಿಲ್, ಮಧು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದರು.
ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ
ಭಾನುವಾರ ಮುಂಜಾನೆ ಆರೋಪಿಗಳನ್ನು ಮಹಜರು ನಡೆಸಲು ಹೊಳೆಬೆನವಳ್ಳಿಗೆ ಕರೆದೊಯ್ದಾಗ, ರೌಡಿಶೀಟರ್ ಮಧು ತಪ್ಪಿಸಿಕೊಳ್ಳುವ ಉದ್ದೇಶದಿಂದ ಪೊಲೀಸ್ ಸಿಬ್ಬಂದಿ ಅಂಜನಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾನೆ.
ಪೊಲೀಸರು ಎಚ್ಚರಿಕೆ ನೀಡಿದರೂ ಕೇಳದಿದ್ದಾಗ, ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ಅವರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.
ಗುಂಡೇಟಿನಿಂದ ಗಾಯಗೊಂಡ ಆರೋಪಿ ಮಧುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲ್ಲೆಯಿಂದ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಅಂಜನಪ್ಪ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















