ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಹರಿಗೆ ಸಮೀಪ ರೈಲಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಮನೋಜ್ ಕುಮಾರ್ (21) ಎಂದು ಗುರುತಿಸಲಾಗಿದ್ದು, ಇವರು ದಾವಣಗೆರೆ ಜಿಲ್ಲೆಯ ಹರಿಹರದ ವಿದ್ಯಾನಗರ ನಿವಾಸಿಯಾಗಿದ್ದಾರೆ. ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದರು.
Also Read>> ಶಿವಮೊಗ್ಗ | ನಗರದ ಹೃದಯ ಭಾಗದಲ್ಲಿ ಕೀಮೋಥೆರಪಿ, ಎಂಡೋಸ್ಕೋಪಿ ಸೌಲಭ್ಯಗಳು ಲಭ್ಯ
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಹಳಿಯ ಮೇಲೆ ಪತ್ತೆಯಾದ ಮೃತದೇಹವನ್ನು ತೆರವುಗೊಳಿಸಿ ತನಿಖೆ ಕೈಗೊಂಡಿದ್ದಾರೆ. ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















