ಕಲ್ಪ ಮೀಡಿಯಾ ಹೌಸ್ | ಕಾಸರಗೋಡು |
ಮಹಿಳೆಯರ ಸಂಚಾರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೇರಳ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಿಯದರ್ಶಿನಿ’ ಯೋಜನೆ ಜೂನ್ 15ರಿಂದ ಕಾಸರಗೋಡು ಜಿಲ್ಲೆಯಲ್ಲಿ ಜಾರಿಯಾಗಲಿದೆ.
ಯೋಜನೆಯಡಿ ಜಿಲ್ಲೆಯ 75 ಕೆಎಸ್‌ಆರ್‌ಟಿಸಿ ಬಸ್ ಸೇವೆಗಳಲ್ಲಿ ಮಹಿಳೆಯರು ನಾಳೆ ಬೆಳಿಗ್ಗೆ 9 ಗಂಟೆಯಿಂದ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
Also Read>> ಗಮನಿಸಿ! ಈ ದಿನ ಮೈಸೂರು-ತಾಳಗುಪ್ಪ-ಮೈಸೂರು ರಾತ್ರಿ ರೈಲಿನಲ್ಲಿ ಮಹತ್ವದ ಬದಲಾವಣೆ
ವಿಶೇಷವೆಂದರೆ, ಕಾಸರಗೋಡು–ಮಂಗಳೂರು, ಕಾಸರಗೋಡು–ಸುಳ್ಯ ಹಾಗೂ ಕಾಸರಗೋಡು–ಪುತ್ತೂರು ಅಂತರರಾಜ್ಯ ಮಾರ್ಗಗಳಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿಯೂ ಈ ಸೌಲಭ್ಯ ಲಭ್ಯವಾಗಲಿದೆ.
ಇದಲ್ಲದೆ, ಟೌನ್-ಟು-ಟೌನ್, ಲಿಮಿಟೆಡ್ ಸ್ಟಾಪ್ ಹಾಗೂ ಆರ್ಡಿನರಿ ಬಸ್ ಸೇವೆಗಳಿಗೂ ಯೋಜನೆಯನ್ನು ವಿಸ್ತರಿಸಲಾಗಿದ್ದು, ಹೆಚ್ಚಿನ ಮಹಿಳಾ ಪ್ರಯಾಣಿಕರು ಇದರ ಪ್ರಯೋಜನ ಪಡೆಯಲಿದ್ದಾರೆ.
Also Read>> ಶಿವಮೊಗ್ಗ | ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ
ಕಾಸರಗೋಡು–ಮಂಗಳೂರು ಮಾರ್ಗದಲ್ಲಿ ಪ್ರತಿದಿನ ಮುಂಜಾನೆ 4 ಗಂಟೆಯಿಂದಲೇ ಬಸ್ ಸಂಚಾರ ಆರಂಭವಾಗುತ್ತಿದ್ದು, ದಿನಕ್ಕೆ ನೂರಕ್ಕೂ ಹೆಚ್ಚು ಸುತ್ತು ಸಂಚಾರ ನಡೆಯುತ್ತಿದೆ.
ಮಂಗಳೂರು, ಪುತ್ತೂರು ಹಾಗೂ ಸುಳ್ಯ ಭಾಗಗಳಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಸಂಚರಿಸುವ ವಿದ್ಯಾರ್ಥಿನಿಯರು ಹಾಗೂ ಮಹಿಳಾ ಉದ್ಯೋಗಿಗಳಿಗೆ ಈ ಯೋಜನೆ ಆರ್ಥಿಕವಾಗಿ ಸಹಕಾರಿಯಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















