ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೇಶದಲ್ಲೇ ಉತ್ತಮ ಹವಾಮಾನ ಹೊಂದಿರುವ ಉದ್ಯಾನ ನಗರಿ ಬೆಂಗಳೂರನ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಕರೆ ನೀಡಿದ್ದಾರೆ.
ಬಿಎನ್ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ವಿಕಸನ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ಹೆರಿಟೇಜ್ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು.
ಗಾಳಿ, ಮಳೆ, ಬಿಸಿಲು ಸೇರಿದಂತೆ ಎಲ್ಲಾ ರೀತಿಯ ಹವಾಮಾನ ಸಮತೋಲನವಿರುವ ಬೆಂಗಳೂರು ನಗರ ನಮ್ಮ ಹೆಮ್ಮೆಯ ಊರು. ಮುಂದಿನ ಪೀಳಿಗೆಗೆ ಶುದ್ಧ ಪರಿಸರ ಉಳಿಸಿ ಹೋಗುವುದು ನಮ್ಮ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟರು.
ಪರಿಸರ ಮತ್ತು ಆರೋಗ್ಯ ಜಾಗೃತಿ ವಿಷಯದಲ್ಲಿ ಬಿ ಎನ್ ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಕಾಳಜಿಗೆ ತೇಜಸ್ವಿ ಸೂರ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಸಕರಾದ ಉದಯ ಗರುಡಾಚಾರ, ಟಿ ಎ ಶರವಣ, ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಕರ್ನಾಟಕ ಕ್ಯಾನ್ಸರ್ ಸೊಸೈಟಿ ಅಧ್ಯಕ್ಷ ಡಾ. ಸಿ ಎ ಕಿಶೋರ್, ಗರುಡ ಪ್ರತಿಷ್ಠಾನದ ಅಧ್ಯಕ್ಷೆ ಮೇದಿನಿ ಗರುಡಾಚಾರ, ಬಿ ಎನ್ ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಅಧ್ಯಕ್ಷ ನಾರಾಯಣ ರಾವ್ ಮಾನೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Also read: ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ
ಮ್ಯಾರಥಾನ್ ಓಟ, ಯೋಗ ಪ್ರದರ್ಶನ, ಮಲ್ಲಕಂಬ, ಸೈಕ್ಲಿಂಗ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಬಿ ಎನ್ ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳ ಸಾವಿರಾರು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















