No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

kalpa News by kalpa News
June 15, 2026
in ಚಾಮರಾಜನಗರ
0
Chamarajanagara: Nalvadi Krishnaraja Wodeyar
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಚಾಮರಾಜನಗರ |

ಮೈಸೂರು ಪ್ರಾಂತ್ಯವನ್ನು ಪರಿಪೂರ್ಣವಾಗಿ ಅಭಿವೃದ್ಧಿಪಡಿಸಿ, ವಿಶ್ವ ಪ್ರಸಿದ್ಧಗೊಳಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಂತನಂತೆ ರಾಜತ್ವವನ್ನು ನಿರ್ವಹಿಸಿದ ಅಪರೂಪದ ಪ್ರಜಾ ವಾತ್ಸಲ್ಯದ ಮಹಾರಾಜರು. ಇವರ ಸೇವೆಯನ್ನು ಪ್ರತಿನಿತ್ಯ ಸ್ಮರಿಸಿ ಗೌರವ ಸಲ್ಲಿಸುವುದು ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಸಂಸ್ಕೃತಿ ಚಿಂತಕರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ಶ್ರೀಗಂಧ ಕನ್ನಡ ಯುವ ವೇದಿಕೆ ಹಾಗೂ ಗಡಿನಾಡ ಕನ್ನಡಿಗ ಹೋರಾಟ ವೇದಿಕೆ ಏರ್ಪಡಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆಗಳ ಕಾರ್ಯಕ್ರಮದಲ್ಲಿ ನಾಲ್ವಡಿ ಕುರಿತು ವಿಷಯ ಮಂಡನೆ ಮಾಡುವ ಮೂಲಕ ರಾಜಶ್ರೀ ಎಂದೇ ಬಿರುದಾಂಕಿತ ನಾಲ್ವಡಿ ಕೃಷ್ಣರಾಜ ಒಡೆಯರ್ ಇಡೀ ವಿಶ್ವವೇ ಬೆರಗಾಗುವಷ್ಟು ಕಾರ್ಯವನ್ನು ಸಾಧಿಸಿದ್ದಾರೆ.
ನೀರಾವರಿ, ವಿದ್ಯುತ್, ಶಿಕ್ಷಣ, ವೈದ್ಯಕೀಯ, ರೈಲ್ವೆ, ಮಹಿಳಾ ಉನ್ನತೀಕರಣ, ಕೈಗಾರಿಕೆ, ಸಣ್ಣ ಕೈಗಾರಿಕೆ, ಗುಡಿ ಕೈಗಾರಿಕೆ, ವಸತಿ ನಿಲಯಗಳ ಸ್ಥಾಪನೆ, ರಸ್ತೆ,ಕಾಲುವೆ, ಸೇತುವೆ ನಿರ್ಮಾಣ, ಪ್ರತಿಯೊಬ್ಬರಿಗೂ ಶಿಕ್ಷಣ, ವಿಶ್ವವಿದ್ಯಾಲಯ ಸ್ಥಾಪನೆ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆ ಮಹಿಳಾ ಮತ್ತು ದಲಿತ ಕಲ್ಯಾಣ, ಮೀಸಲಾತಿ, ಕಲೆ, ಸಾಹಿತ್ಯ, ಸಂಗೀತ, ನೃತ್ಯ, ಶಿಲ್ಪಕಲೆ, ದೇವಾಲಯಗಳ ನಿರ್ಮಾಣ, ಚಿತ್ರಕಲೆ, ಹತ್ತು ಹಲವು ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಕೊಡುಗೆ ನೀಡುವ ಮೂಲಕ ಶ್ರೇಷ್ಠ ಕಾರ್ಯವನ್ನು ಸಾಧಿಸಿ ಶತಮಾನಗಳಷ್ಟು ಅಭಿವೃದ್ಧಿಯನ್ನು ಸಾಧಿಸಿ ಜಗತ್ತೆ ಮೈಸೂರಿನ ಕಡೆಗೆ ನೋಡುವಂತೆ ಮಾಡಿದ ಹೆಮ್ಮೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಯೊಬ್ಬರಿಗೂ ಆದರ್ಶವಾಗಿದ್ದಾರೆ. ಸಂತನಂತೆ ರಾಜತ್ವದ ಮೂಲಕ ಸಮಗ್ರ ಪರಿಪೂರ್ಣ ಆಡಳಿತವನ್ನು ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ದಿವಾನರಾಗಿ ಸೇವೆ ಸಲ್ಲಿಸಿದ ಸರ್ ಎಂ ವಿಶ್ವೇಶ್ವರಯ್ಯನವರು ಹಾಗೂ ಮಿರ್ಜಾ ಇಸ್ಮಾಯಿಲ್ ರವರ ಪೂರ್ಣ ಸೇವೆ ಹಾಗೂ ಅಭಿವೃದ್ಧಿ ಮೈಸೂರು ಪ್ರಾಂತ್ಯವನ್ನು ಮುನ್ನಡೆಸಲು ಸಾಧ್ಯವಾಯಿತು. ಮೈಸೂರು ಪ್ರಾಂತ್ಯದ ಭಾಗವಾಗಿದ್ದ ಚಾಮರಾಜನಗರ ಜನತೆ ಮೈಸೂರು ರಾಜಮನೆತನಕ್ಕೆ ಸದಾ ಋಣಿಯಾಗಿದ್ದಾರೆ. ಚಾಮರಾಜನಗರ ಮೈಸೂರು ಮಹಾರಾಜರ ಸವಿ ನೆನಪಿನಲ್ಲಿ ನಿರ್ಮಿಸಿದ ನಗರವಾಗಿದ್ದು ಇಂದು ಜಿಲ್ಲಾ ಕೇಂದ್ರವಾಗಿ ತನ್ನದೇ ಆದ ಛಾಪು ಮೂಡಿಸಲು ಕಾರಣವಾಗಿದೆ. ನಾಲ್ವಡಿ ಅವರನ್ನು ಸ್ಮರಿಸುವುದೇ ಪುಣ್ಯದ ಕೆಲಸವೆಂದು ತಿಳಿಸಿದರು.

Also read: ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

ಉದ್ಯಮಿ ಶ್ರೀನಿಧಿ ಕುದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮೈಸೂರು ಮಹಾರಾಜರ ಕೊಡುಗೆಗಳು ಅಪಾರವಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಮೀಸಲಾತಿಯನ್ನು ನೀಡುವ ಮೂಲಕ ಸರ್ವರ ಅಭಿವೃದ್ಧಿಗೆ, ಕಲ್ಯಾಣಕ್ಕೆ ಶ್ರಮಿಸಿದ ಮಹಾನ್ ವ್ಯಕ್ತಿತ್ವ.ಅವರ ಕುರಿತು ಕಾರ್ಯಕ್ರಮ ರೂಪಿಸಿರುವ ಸರ್ವರು ಅಭಿನಂದನೆಗೆ ಅರ್ಹರು ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆಯನ್ನು ಕನ್ನಡ ಸಂಘಟನೆಯ ಮುಖಂಡರಾದ ಶ್ರೀನಿವಾಸ್ ಗೌಡ ಮಾತನಾಡಿ ಅರಿ ಕೊಠಾರವಾಗಿದ್ದ ನಗರವನ್ನು ಚಾಮರಾಜನಗರ ವೆಂದು ಪುನರ್ ಪ್ರತಿಷ್ಠಾಪಿಸಿ ದೇವಾಲಯವನ್ನು ನಿರ್ಮಿಸಿ ಸಮಗ್ರ ಅಭಿವೃದ್ಧಿಗೆ ಕೊಡುಗೆಯಾಗಿ ನೀಡಿದ ಮಹಾರಾಜರನ್ನು ನಾವೆಲ್ಲರೂ ಗೌರವಿಸಬೇಕು. ಮೈಸೂರು ಸಂಸ್ಥಾನದ ಚಾಮರಾಜ ಒಡೆಯರ್ ಅವರ ಹೆಸರಿನಲ್ಲಿ ನಿರ್ಮಾಣವಾಗಿರುವ ಚಾಮರಾಜನಗರ ಇಂದು ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ದಿಕ್ಕಿನಲ್ಲಿ ಹೋಗುತ್ತಿದೆ ಎಂದು ತಿಳಿಸಿದರು.

ಶ್ರೀಗಂಧ ಕನ್ನಡ ಯುವ ವೇದಿಕೆಯ ಅಧ್ಯಕ್ಷರಾದ ರವಿಚಂದ್ರ ಪ್ರಸಾದ್ ಕಹಳೆರವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜೀವನ ಮತ್ತು ಸಾಧನೆಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ ಚಾಮರಾಜನಗರ ಜನತೆ ಮೈಸೂರು ಸಂಸ್ಥಾನಕ್ಕೆ ಸದಾಕಾಲ ಸ್ಮರಿಸಿ ಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸುತ್ತಿದ್ದೇವೆ ಎಂದರು.

ಸಭೆಯಲ್ಲಿ ಕನ್ನಡ ಚಳುವಳಿಯ ಹಿರಿಯ ಮುಖಂಡರಾದ ಶಾ ಮುರಳಿ , ಕೊಳ್ಳೇಗಾಲ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೊಂಗರಹಳ್ಳಿ ನಾಗರಾಜು ಕನ್ನಡ ಹೋರಾಟಗಾರ ಪಣ್ಯದಹುಂಡಿ ರಾಜು, ಗಡಿನಾಡ ಹೋರಾಟ ವೇದಿಕೆ ಜಿಲ್ಲಾಧ್ಯಕ್ಷ ರಾಜಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಶಿವಲಿಂಗ ಮೂರ್ತಿ, ಬಿಕೆ ಆರಾಧ್ಯ,ಸರಸ್ವತಿ,ಪದ್ಮಾಕ್ಷಿ, ಪದ್ಮ ಸಿದ್ದರಾಜು, ಲೋಕನಾಥ್, ಅಮಚವಾಡಿ ಮಹೇಂದ್ರ,ಗೋವಿಂದ, ಬದ್ರಿ ಮಹಮ್ಮದ್ ಗೌಸ್, ಯರಿಯೂರು ನಾಗರಾಜ್, ತಾಂಡವಮೂರ್ತಿ, ಪರಮೇಶ್ವರ್ ಯೋಗೇಶ್ ಇದ್ದರು.

ಅಪ್ಪು ಮೆಲೋಡಿಸ್ ಕಾಗಲ ವಾಡಿ ರಂಗಸ್ವಾಮಿ ರವರು ಮೈಸೂರು ಸಂಸ್ಥಾನದ ಒಡೆಯರ ಹಾಗೂ ಕನ್ನಡ ಗೀತೆಗಳ ಗಾಯನದ ಮೂಲಕ ರಸದೌತಣ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

https://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited   

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNalvadi Krishnaraja WodeyarNews in KannadaNews Kannadaಚಾಮರಾಜನಗರ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

Next Post

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

kalpa News

kalpa News

Next Post
Two Brunt in Mysore Pub Tragedy

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL