ಕಲ್ಪ ಮೀಡಿಯಾ ಹೌಸ್ | ಮೈಸೂರು |
ರಕ್ತದಾನವು ಮಾನವ ಜೀವ ಉಳಿಸುವ ಅತ್ಯಂತ ಶ್ರೇಷ್ಠ ಸೇವೆಯಾಗಿದ್ದು, ಪ್ರತಿಯೊಬ್ಬರೂ ಇದರಲ್ಲಿ ಭಾಗವಹಿಸುವುದು ಸಮಾಜದ ಒಳಿತಿಗಾಗಿ ಅತ್ಯವಶ್ಯಕವೆಂದು ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ತಿಳಿಸಿದರು.
ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರು ರೈಲ್ವೆ ಆಸ್ಪತ್ರೆ ಹಾಗೂ ಕೆ.ಆರ್. ಆಸ್ಪತ್ರೆ / ಮೈಸೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ರಕ್ತನಿಧಿ ಘಟಕದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಯಂಪ್ರೇರಿತ ರಕ್ತದಾನದ ಮಹತ್ವವನ್ನು ವಿವರಿಸಿರು ಹಾಗೂ ಸ್ವತಃ ರಕ್ತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾದರು.
Also read: Blood Donation Camp Successfully Organised at Mysuru Division
ಈ ಮಹತ್ವದ ಕಾರ್ಯದಲ್ಲಿ ಉತ್ಸಾಹದಿಂದ ಭಾಗವಹಿಸಿದ ರೈಲ್ವೆ ಸಿಬ್ಬಂದಿ ಹಾಗೂ ಸ್ವಯಂಸೇವಕರನ್ನು ಅವರು ಅಭಿನಂದಿಸಿದರು.
ಶಿಬಿರದಲ್ಲಿ ಅಧಿಕಾರಿಗಳು, ಸಿಬ್ಬಂದಿ ಮತ್ತು ಸ್ವಯಂಸೇವಕರು ಸೇರಿ ಒಟ್ಟು 42 ಮಂದಿ ರಕ್ತದಾನ ಮಾಡಿದ್ದು, ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರೆಯಿತು. ಈ ಮೂಲಕ ತುರ್ತು ವೈದ್ಯಕೀಯ ಅವಶ್ಯಕತೆಗಳಿಗೆ ಅಗತ್ಯವಾದ ರಕ್ತದ ಸಂಗ್ರಹವನ್ನು ಮಾಡುವುದರ ಜೊತೆಗೆ ರೈಲ್ವೆ ಸಿಬ್ಬಂದಿಯಲ್ಲಿ ಸಾಮಾಜಿಕ ಹೊಣೆಗಾರಿಕೆಯ ಮನೋಭಾವವನ್ನು ಮತ್ತಷ್ಟು ವೃದ್ಧಿಸಲಾಯಿತು. ಮೈಸೂರು ವಿಭಾಗವು ಸಾರ್ವಜನಿಕ ಹಿತಾಸಕ್ತಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳಿಗೆ ನಿರಂತರವಾಗಿ ಪ್ರೋತ್ಸಾಹ ನೀಡುತ್ತಿದ್ದು, ಸಮಾಜದ ಒಳಿತಿಗಾಗಿ ಇಂತಹ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


Comments 1