ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಚಿತ್ರದುರ್ಗದ ಬಳಿಯ ಗುಡ್ಡದ ರಂಗವ್ವನಹಳ್ಳಿಯಲ್ಲಿರುವ ಚಿತ್ರದುರ್ಗ ಸರ್ಕಾರೀ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (ಸಿಎಂಸಿಆರ್’ಐ)ಯಲ್ಲಿ ತಜ್ಞರ ವಿಶೇಷ ಉಪನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ಮತ್ತು ಡಿ.ಎಲ್.ಎಸ್.ಎ. ಅಧ್ಯಕ್ಷರಾದ ನ್ಯಾಯಾಧೀಶ ಜಿ.ಡಿ. ಮಹಾವರ್ಕರ್ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಿ.ಎಂ.ಸಿ.ಆರ್.ಐ. ಡೀನ್ ಹಾಗೂ ನಿರ್ದೇಶಕರಾದ ಡಾ. ಯುವರಾಜ್ ಭಾಗವಹಿಸಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ರೋ. ದಿಲ್ಷದ್ ಉನ್ನೀಸಾ ವಹಿಸಿದ್ದರು.
Also Read>> ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ
ಈ ಉಪನ್ಯಾಸ ಸರಣಿಯ ಮುಖ್ಯ ಉದ್ದೇಶ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ, ಆರೋಗ್ಯ ಮತ್ತು ಪರಿಸರ ಕ್ಷೇತ್ರಗಳಲ್ಲಿನ ನವೀನ ಬೆಳವಣಿಗೆಗಳ ಬಗ್ಗೆ ಅರಿವು ಮೂಡಿಸುವುದಾಗಿತ್ತು.
ಮೊದಲ ಉಪನ್ಯಾಸದಲ್ಲಿ ತಂತ್ರಜ್ಞಾನ ತಜ್ಞ ಹಾಗೂ ಲಾತವ್ಯ ಟೆಕ್ನಾಲಜೀಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋ. ಶಶಿಧರ್ ರಾವ್ ಅವರು, “ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಜಾಗತಿಕ ಸಾಧ್ಯತೆಗಳು ಮತ್ತು ಸವಾಲುಗಳು – ಆರೋಗ್ಯ ಕ್ಷೇತ್ರ ಹಾಗೂ ರೋಬೋಟಿಕ್ ಶಸ್ತ್ರಚಿಕಿತ್ಸೆಯಲ್ಲಿ ಎಐ ಪಾತ್ರ” ಎಂಬ ವಿಷಯದ ಕುರಿತು ಸವಿಸ್ತಾರವಾಗಿ ಮಾತನಾಡಿದರು. ಅವರು ವೈದ್ಯಕೀಯ ಕ್ಷೇತ್ರದಲ್ಲಿ ಎಐ ಬಳಕೆಯ ಮೂಲಕ ಚಿಕಿತ್ಸಾ ವಿಧಾನಗಳಲ್ಲಿ ಆಗುತ್ತಿರುವ ಕ್ರಾಂತಿಕಾರಿ ಬದಲಾವಣೆಗಳನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಪದಾಧಿಕಾರಿಗಳು, ಸಿ.ಎಂ.ಸಿ.ಆರ್.ಐ. ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ವೈದ್ಯರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಡಿ.ಎಲ್.ಎಸ್.ಎ. ಸದಸ್ಯರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Also Read>> ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ
ಈ ಉಪನ್ಯಾಸ ಕಾರ್ಯಕ್ರಮವು ವಿದ್ಯಾರ್ಥಿಗಳು ಮತ್ತು ವೈದ್ಯಕೀಯ ವಲಯದವರಿಗೆ ತಂತ್ರಜ್ಞಾನ ಮತ್ತು ಪರಿಸರ ಜಾಗೃತಿ ಕುರಿತಂತೆ ಹೊಸ ದೃಷ್ಟಿಕೋನವನ್ನು ಒದಗಿಸಿದೆ. ಇಂತಹ ಕಾರ್ಯಕ್ರಮಗಳು ಭವಿಷ್ಯದ ವೈದ್ಯರು ಮತ್ತು ತಜ್ಞರಿಗೆ ಸಮಗ್ರ ಜ್ಞಾನ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ.
ರೋಟರಿ ಕ್ಲಬ್ ಆಫ್ ಚಿನ್ಮೂಲಾದ್ರಿ ಚಿತ್ರದುರ್ಗ, ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (ಡಿ.ಎಲ್.ಎಸ್.ಎ.) ಹಾಗೂ ಸಿ.ಎಂ.ಸಿ.ಆರ್.ಐ. ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


Comments 1