ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ವಾರ್ಡ್ ನಂ. 2ರ ಇಂದಿರಾ ಬಡಾವಣೆಯಲ್ಲಿ ನೂತನ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರದ ಪ್ರತಿಯೊಂದು ಬಡಾವಣೆಯಿಗೂ ಉತ್ತಮ ನಾಗರಿಕ ಮೂಲಸೌಕರ್ಯಗಳನ್ನು ಒದಗಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದರು.
ಬಡಾವಣೆಯ ನಾಗರಿಕರಿಗೆ ಸುಗಮ ಸಂಚಾರಕ್ಕಾಗಿ ಗುಣಮಟ್ಟದ ರಸ್ತೆಗಳು ಅಗತ್ಯವಾಗಿದ್ದು, ಕಾಮಗಾರಿಯನ್ನು ಯಾವುದೇ ವಿಳಂಬವಿಲ್ಲದೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.
Also read: ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗೆ ಹೃದಯಾಘಾತ; ಚಿಕಿತ್ಸೆ ಫಲಕಾರಿಯಾಗದೆ ಸಾವು
ಕಾಮಗಾರಿಯ ವೇಳೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದ್ದು, ಗುಣಮಟ್ಟದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿದ ಅವರು, ಬಡಾವಣೆಯ ಇತರ ಸಮಸ್ಯೆಗಳನ್ನು ಆಲಿಸಿ ಹಂತ ಹಂತವಾಗಿ ಪರಿಹರಿಸುವ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಜ್ಞಾನೇಶ್ವರ್, ನಾಗರಾಜ್ ಸೇರಿದಂತೆ ವಿವಿಧ ಮುಖಂಡರು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















