ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿಕಾರಿಪುರ ತಾಲ್ಲೂಕಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಸುನೀಲ್ ನಾಯ್ಕ್ (32) ಹಾಗೂ ಸಜುನೀಲ್ ಟಿ.ವಿ (30) ಎಂದು ಗುರುತಿಸಲಾಗಿದೆ. ಇವರಿಂದ ಸುಮಾರು ₹15,000 ಮೌಲ್ಯದ 658 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Also Read>> ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ
ಯಾತ್ರೀ ನಿವಾಸಕ್ಕೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದಲ್ಲಿ ಶಿಕಾರಿಪುರ ಪೊಲೀಸ್ ಠಾಣೆಯ ಪಿಎಸ್‌ಐ ಶರತ್ ಹೆಚ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಸಂಬಂಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










