ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಮನೆಯೊಳಗೆ ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕೊಲೆಯಾದ ಯುವಕನನ್ನು ಸುತ್ತುಕೋಟೆ ಗ್ರಾಮದ ನಿವಾಸಿ ಪ್ರವೀಣ್ (29) ಎಂದು ಗುರುತಿಸಲಾಗಿದೆ. ಪ್ರವೀಣ್ ಟ್ರಾಕ್ಟರ್ ಬಾಡಿಗೆ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಿಕೊಂಡು ಜೀವನ ನಡೆಸುತ್ತಿದ್ದನು ಎಂದು ತಿಳಿದುಬಂದಿದೆ.
Also Read>> ಆಹಾರದ ಜಾಗೃತಿಗಾಗಿ ಅನ್ನಬ್ರಹ್ಮ ಚಾತುರ್ಮಾಸ್ಯ: ರಾಮಚಂದ್ರಾಪುರ ಶ್ರೀ
ಎಂದಿನಂತೆ ನಿನ್ನೆ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದ ವೇಳೆ ಈ ಕೃತ್ಯ ನಡೆದಿರುವುದಾಗಿ ಶಂಕಿಸಲಾಗಿದೆ. ಆರೋಪಿಗಳು ತಲೆ ಭಾಗಕ್ಕೆ ಮಾರಕಾಸ್ತ್ರದಿಂದ ಹೊಡೆದು ಹತ್ಯೆ ಮಾಡಿರುವ ಸಾಧ್ಯತೆ ವ್ಯಕ್ತವಾಗಿದೆ.
ಇಂದು ಬೆಳಿಗ್ಗೆ ಕೆಲಸದ ನಿಮಿತ್ತ ಕೆಲ ಯುವಕರನ್ನು ಕರೆಸಿಕೊಂಡಿದ್ದ ಪ್ರವೀಣ್‌ಗೆ ಅವರು ಸಂಪರ್ಕಿಸಲು ಪ್ರಯತ್ನಿಸಿದರೂ, ಫೋನ್ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಅನುಮಾನಗೊಂಡು ಮನೆಯೊಳಗೆ ಹೋಗಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ಪ್ರಾಥಮಿಕವಾಗಿ ವ್ಯವಹಾರಿಕ ವೈಷಮ್ಯದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Darling Krishna, Milana Nagaraj ’s Love Mocktail 3 Premieres This 21st on Zee Kannada




















