ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕುಟುಂಬ ಕಲಹದ ಹಿನ್ನೆಲೆಯಲ್ಲಿ ತಂದೆಯ ವಿರುದ್ಧ ಮಗನೊಬ್ಬ 112 ಪೊಲೀಸರಿಗೆ ಕರೆ ಮಾಡಿದ ಘಟನೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾಹಿತಿ ಪ್ರಕಾರ, ಮನೆಯಲ್ಲಿ ತಂದೆ-ತಾಯಿ ನಡುವೆ ಜಗಳ ನಡೆಯುತ್ತಿದ್ದು, ತಂದೆ ತಾಯಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಗ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತಕ್ಷಣ ಸ್ಥಳಕ್ಕೆ ಆಗಮಿಸುವಂತೆ ಮನವಿ ಮಾಡಿದ್ದಾನೆ.

Also read: Cymatic Carnatic-see the sound of music, a program with a novel vision
ಸೂಚನೆ ದೊರಕುತ್ತಿದ್ದಂತೆಯೇ 112 ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ್ದಾರೆ. ಆದರೆ ಪೊಲೀಸ್ ವಾಹನವನ್ನು ಗಮನಿಸಿದ ತಂದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಮತ್ತೇನಾದರೂ ಕಿರುಕುಳ ನೀಡಿದರೆ ಸಮೀಪದ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಲು ಕುಟುಂಬ ಸದಸ್ಯರಿಗೆ ಪೊಲೀಸರು ಸೂಚನೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















