ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಾಲಕಿಯನ್ನು ವಿವಾಹವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕ ಮತ್ತು ಇದಕ್ಕೆ ಸಹಕಾರ ನೀಡಿದ್ದ ಆತನ ಮೂವರು ಸಂಬಂಧಿಗಳಿಗೆ ಶಿವಮೊಗ್ಗದ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ (FTSC-1) ತೀರ್ಪು ನೀಡಿದೆ.
ಜೈಲು ಶಿಕ್ಷೆಯ ಜೊತೆಗೆ 1.85 ಲಕ್ಷ ರೂ. ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
Also Read>> 1300 ಕೆರೆಗಳಲ್ಲಿ 500 ಒತ್ತುವರಿ | ಸೊರಬದಲ್ಲಿ ಗಂಭೀರ ಪರಿಸ್ಥಿತಿ | ಅನಂತ ಹೆಗಡೆ ಅಶಿಸರ
ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ಅವರು 20/6/2026 ರಂದು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಹೆಚ್ ಆರ್ ಅವರು ವಾದ ಮಂಡಿಸಿದ್ದರು.
ಏನಿದು ಪ್ರಕರಣ?
ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2024 ರಲ್ಲಿ ಪ್ರಕರಣ ವರದಿಯಾಗಿತ್ತು. 17 ವರ್ಷದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಬಾಲಕಿಯನ್ನು ವಿವಾಹವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಹಾಗೂ ಬಾಲ್ಯ ವಿವಾಹ ಕಾಯ್ದೆಗಳಡಿ ಪ್ರಕರಣ ದಾಖಲಾಗಿತ್ತು.
ಅಂದಿನ ಕುಂಸಿ ಠಾಣೆ ಇನ್ಸ್’ಪೆಕ್ಟರ್ ಹರೀಶ್ ಕೆ ಪಾಟೀಲ್ ಅವರು ಪ್ರಕರಣದ ತನಿಖೆ ನಡೆಸಿದ್ದರು. ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
From Coast to Glory: Naija Hegde’s Inspiring Rise to Success




















