ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿರುವ ನಿಜವಾದ ಶಕ್ತಿ ಗ್ರಾಹಕರೇ ಆಗಿದ್ದಾರೆ. ಅವರ ವಿಶ್ವಾಸ, ಸಹಕಾರ ಮತ್ತು ಪ್ರೋತ್ಸಾಹವೇ ಸಂಸ್ಥೆಯನ್ನು ಇಂದಿನ ಮಟ್ಟಕ್ಕೆ ಬೆಳೆಸಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಪರಶುರಾಮ್ ಹೇಳಿದರು.
ನಗರದ ರಾಯಲ್ ಆರ್ಕಿಡ್ ಹೋಟೆಲ್‌ನಲ್ಲಿ ಕೊಡಚಾದ್ರಿ ಚಿಟ್ಸ್ ಪ್ರೈ. ಲಿ. ವತಿಯಿಂದ ಆಯೋಜಿಸಿದ್ದ “ಅಭಿನಂದನ 2026 – ಬಾಂಧವ್ಯದ ಬೆಸುಗೆ” ಗ್ರಾಹಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಾರದರ್ಶಕತೆ, ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಹಾಗೂ ಗ್ರಾಹಕ ಸ್ನೇಹಿ ಸೇವೆಗಳ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರ ಆರ್ಥಿಕ ಅಭಿವೃದ್ಧಿಗೆ ಕೈಜೋಡಿಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ತಿಳಿಸಿದರು.
Also read: ಶಿವಮೊಗ್ಗ | ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆಗೆ ಕಿಡಿಕಾರಿದ ಶಾಸಕ ಚನ್ನಬಸಪ್ಪ
ಈ ಸಂದರ್ಭದಲ್ಲಿ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರವಹಿಸಿರುವ ಗ್ರಾಹಕರನ್ನು ಸನ್ಮಾನಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಿವಮೊಗ್ಗ, ಹೊಸನಗರ, ಶಿಕಾರಿಪುರ, ತೀರ್ಥಹಳ್ಳಿ, ಚನ್ನಗಿರಿ, ತರೀಕೆರೆ, ಹೊನ್ನಾಳಿ ಸೇರಿದಂತೆ ವಿವಿಧ ಶಾಖೆಗಳ ಗ್ರಾಹಕರು, ಗಣ್ಯರು, ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















