ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದ ತಾಲ್ಲೂಕು ಕಚೇರಿಯ ಆಡಳಿತ ವಿಭಾಗದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಸರ್ಚ್ ವಾರಂಟ್‌ನೊಂದಿಗೆ ದಿಢೀರ್ ದಾಳಿ (Lokayukta Raid) ನಡೆಸಿ ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ.
ಗೋವಿಂದಾಪುರದಲ್ಲಿ ಸುಮಾರು 11 ಎಕರೆ ವಿಸ್ತೀರ್ಣದ ಸರ್ಕಾರಿ ಜಮೀನನ್ನು ಖಾಸಗಿಯವರಿಗೆ ಪರಭಾರೆ ಮಾಡಲು ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂಬ ಗಂಭೀರ ದೂರಿನ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
Also Read>> ಬೆಂಗಳೂರು: ಆಗಸ್ಟ್ 31ರೊಳಗೆ ಪಂಚ ಪಾಲಿಕೆ ಚುನಾವಣೆ ಸಾಧ್ಯತೆ — ಸಿದ್ಧತೆ ಆರಂಭ
ಗೋವಿಂದಾಪುರ ವ್ಯಾಪ್ತಿಯ ಎರಡು ಪ್ರತ್ಯೇಕ ಖಾತೆಗಳಲ್ಲಿನ ಸರ್ಕಾರಿ ಜಮೀನಿನಲ್ಲಿ ಈಗಾಗಲೇ 33 ಶೆಡ್‌ಗಳನ್ನು ನಿರ್ಮಿಸಲಾಗಿದ್ದು, ಅಲ್ಲಿ ವಾಸವಿರುವವರಿಗೆ ಖಾತೆ ಮಾಡಿಕೊಡುವುದಾಗಿ ಹೇಳಿ ಕೆಲವು ಮಧ್ಯವರ್ತಿಗಳು ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸರ್ಚ್ ವಾರಂಟ್ ಪಡೆದು ಲೋಕಾಯುಕ್ತ ದಾಳಿ
ಈ ದೂರಿನ ಬೆನ್ನತ್ತಿದ ಲೋಕಾಯುಕ್ತ ಅಧಿಕಾರಿಗಳು ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ತಾಲ್ಲೂಕು ಕಚೇರಿಯ ಆಡಳಿತ ವಿಭಾಗದ ಕಡತಗಳನ್ನು ಪರಿಶೀಲಿಸುತ್ತಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಅಗಸವಳ್ಳಿ ಪಿಡಿಒ ಕಚೇರಿಯಲ್ಲಿಯೂ ಅಧಿಕಾರಿಗಳು ಸುದೀರ್ಘ ಪರಿಶೀಲನೆ ನಡೆಸಿದ್ದರು.
ಶಿವಮೊಗ್ಗ ಲೋಕಾಯುಕ್ತ ಠಾಣೆಯ 15ಕ್ಕೂ ಹೆಚ್ಚು ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಕ ತಂಡಗಳು ಈ ಕಾರ್ಯಾಚರಣೆಯಲ್ಲಿ ನಿರತವಾಗಿವೆ.
ಗೋವಿಂದಾಪುರ ಜಮೀನು ಹಗರಣದ ಜೊತೆಗೆ ನವುಲೆ ಕೆರೆ ಒತ್ತುವರಿ ಪ್ರಕರಣ ಹಾಗೂ ಸಾರ್ವಜನಿಕರ ಕೆಲಸಕಾರ್ಯಗಳಲ್ಲಿ ವಿಳಂಬವಾಗುತ್ತಿರುವ ಕುರಿತು ಬಂದಿರುವ ದೂರುಗಳನ್ನೂ ಪರಿಗಣಿಸಿ ದಾಖಲೆಗಳ ತಪಾಸಣೆ ಮುಂದುವರಿದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










