ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
“ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ. ನನಗೆ ಸಚಿವ ಸ್ಥಾನ ನೀಡುವುದು ಅಥವಾ ಕೈಬಿಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ” ಎಂದು ಮಾಜಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಶಿಕ್ಷಣ ಇಲಾಖೆಗೆ ಕೇಂದ್ರ ಸರ್ಕಾರದಿಂದ ಯಾವುದೇ ಆರ್ಥಿಕ ನೆರವು ದೊರಕಿಲ್ಲ ಎಂದು ಆರೋಪಿಸಿದರು. ಇಲಾಖೆಯ ಅಭಿವೃದ್ಧಿ ಕಾರ್ಯಗಳನ್ನು ರಾಜ್ಯ ಸರ್ಕಾರದ ಅನುದಾನದಿಂದಲೇ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ, NEET ಪರೀಕ್ಷೆಯ ನಿಯಂತ್ರಣವನ್ನು ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರದ ಕೈಯಲ್ಲಿ ಇರಿಸಬಾರದು. ನೀಟ್ ಪರೀಕ್ಷಾ ವ್ಯವಸ್ಥೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
Also read: ಮೈಸೂರು ರೈಲ್ವೆ ವಿಭಾಗದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಯಶಸ್ವಿ
ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಳ್ಳುವ ಬಿಜೆಪಿ ಆಡಳಿತವಿರುವ ಮಹಾರಾಷ್ಟ್ರದಲ್ಲಿಯೇ TET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ನಡೆದಿರುವುದನ್ನು ಉಲ್ಲೇಖಿಸಿದರು. ಈ ವಿಚಾರದಲ್ಲಿ ಬಿಜೆಪಿ ನಾಯಕರು ಮೌನ ವಹಿಸಿರುವುದು ಖಂಡನೀಯವಾಗಿದ್ದು, ಪರೀಕ್ಷಾ ಅಕ್ರಮಗಳು ಮಕ್ಕಳ ಭವಿಷ್ಯಕ್ಕೆ ದೊಡ್ಡ ಹೊಡೆತ ನೀಡಿವೆ ಎಂದು ಟೀಕಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









