ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರ ತಾಲೂಕಿನ ತೊಗರ್ಸಿ ಮಹಾಶಕ್ತಿ ಕೇಂದ್ರದ ಬಳ್ಳಿಗಾವಿ ಗ್ರಾಮದ ಬೂತ್ ವಾಸ್ತವ್ಯದ ನಿಮಿತ್ತ, ಐತಿಹಾಸಿಕ ಬಳ್ಳಿಗಾವಿ ಗ್ರಾಮದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಿಕಾರಿಪುರ ಕ್ಷೇತ್ರದ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರು ಗ್ರಾಮ ವಾಸ್ತವ್ಯ ಹೂಡಿದರು.
ಗ್ರಾಮ ವಾಸ್ತವ್ಯದ ವೇಳೆ ಗ್ರಾಮಸ್ಥರೊಂದಿಗೆ ಆತ್ಮೀಯವಾಗಿ ಬೆರೆತು ಅವರ ಕಷ್ಟ–ಸುಖಗಳನ್ನು ಆಲಿಸಿದ ಅವರು, ಗ್ರಾಮದ ಅಭಿವೃದ್ಧಿಗೆ ಸಂಬಂಧಿಸಿದ ಸಲಹೆಗಳನ್ನು ಸ್ವೀಕರಿಸಿದರು. ಜನರೊಂದಿಗೆ ನೇರ ಸಂಪರ್ಕ ಹೊಂದುವ ಮೂಲಕ ಅವರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಿ, ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಗ್ರಾಮ ವಾಸ್ತವ್ಯವು ಜನರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವ ಜೊತೆಗೆ, ಜನರ ನಿರೀಕ್ಷೆಗಳಿಗೆ ಅನುಗುಣವಾಗಿ ಅಭಿವೃದ್ಧಿಯ ಹೊಸ ಅಧ್ಯಾಯಕ್ಕೆ ನಾಂದಿ ಹಾಡುವ ಕಾರ್ಯಕ್ರಮವಾಗಿದೆ ಎಂದು ಶ್ರೀ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರು ಹೇಳಿದರು.
Also read: ಆದಿತ್ಯ ಬಿರ್ಲಾ ಜ್ಯುವೆಲ್ಲರಿ | ಅತ್ಯಧಿಕ ಹೊಳಪಿನ ವಜ್ರಗಳೊಂದಿಗೆ ಹೊಸ ಉದ್ದಿಮೆ ಮಾನದಂಡ ಸ್ಥಾಪಿಸಿದ ಇಂದ್ರಿಯ
ಶಿಕಾರಿಪುರ ತಾಲೂಕಿನ ಬಳ್ಳಿಗಾವಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯದ ಅಂಗವಾಗಿ, ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಿಕಾರಿಪುರ ಕ್ಷೇತ್ರದ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ ಅವರು ಇಂದು ಬೆಳಿಗ್ಗೆ ಬಳ್ಳಿಗಾವಿ ಗ್ರಾಮದಿಂದ ಮಾಳಗುಂಡನಕೊಪ್ಪ ಗ್ರಾಮದವರೆಗೆ ವಾಯುವಿಹಾರ ನಡೆಸಿದರು.
ಈ ಸಂದರ್ಭದಲ್ಲಿ ಮಾರ್ಗಮಧ್ಯೆ ಭೇಟಿಯಾದ ಗ್ರಾಮದ ಹಿರಿಯರು, ಯುವಕರು ಹಾಗೂ ಸಾರ್ವಜನಿಕರೊಂದಿಗೆ ಆತ್ಮೀಯವಾಗಿ ಬೆರೆತು ಕುಶಲೋಪರಿ ವಿಚಾರಿಸಿದರು. ಗ್ರಾಮೀಣ ಬದುಕಿನ ಸಹಜ ಸೊಬಗನ್ನು ಆಸ್ವಾದಿಸುತ್ತಾ, ಜನರೊಂದಿಗೆ ಹೆಜ್ಜೆ ಹಾಕಿದ ಈ ವಾಯುವಿಹಾರವು ಆತ್ಮೀಯತೆ ಮತ್ತು ಸರಳತೆಯ ಪ್ರತೀಕವಾಗಿ ಮೂಡಿಬಂದಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









