ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಾಂಜಾ ಸೇವನೆ ಮಾಡಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಸ್ವಂತ ಅಜ್ಜಿಯ ತಲೆಮೇಲೆ ಮೊಮ್ಮಗನೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಂದಿರುವ ಘಟನೆ ಶಿವಮೊಗ್ಗ (Shivamogga) ನಗರದ ಮಿಳಘಟ್ಟದಲ್ಲಿ ನಡೆದಿದೆ.
Also Read>> ಗೃಹಲಕ್ಷ್ಮೀ ಯೋಜನೆ ಅಕ್ರಮ | ಎಸ್‍ಐಟಿ ತನಿಖೆಗೆ ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ ಆಗ್ರಹ
ನಗರದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಮೊಮ್ಮಗ ಸ್ವಂತ ಅಜ್ಜಿಯ ತಲೆ ಮೇಲೆ ಸೈಜ್ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ಸಂಜೆ ನಡೆದಿದೆ.
ಅಜ್ಜಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಎಸ್‌ಪಿ ನಿಖಿಲ್ ಬಿ ಸೇರಿದಂತೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
ಆರೋಪಿತ ಮೊಮ್ಮಗ ಗಾಂಜಾ ವ್ಯಸನಿಯಾಗಿದ್ದ. ಈ ಬಗ್ಗೆ ಅಜ್ಜಿಯು ಪೊಲೀಸರಿಗೆ ದೂರು ನೀಡಲು ತೆರಳುತ್ತಿದ್ದರು. ಇದರಿಂದ ಆಕ್ರೋಶಗೊಂಡ ಮೊಮ್ಮಗನು ರಸ್ತೆಯಲ್ಲಿಯೇ ಅಜ್ಜಿಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಘಟನೆಯ ಕುರಿತಂತೆ ಇನ್ನಷ್ಟೆ ಹೆಚ್ಚಿನ ವಿವರಗಳು ತಿಳಿದು ಬರಬೇಕಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, info@kalpa.news









