ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅನುಪಿನಕಟ್ಟೆಯ ರಸ್ತೆಯಲ್ಲಿರವ ತುಂಗಾ ಮೇಲ್ದಂಡೆ ಚಾಲನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ತುಂಗಾ ನಗರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ಸೈಯದ್ (24), ಮಲ್ಲಿಕ್ (22) ಎಂದು ಗುರುತಿಸಲಾಗಿದೆ.
ಜೂನ್ 29 ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಅನುಪಿನಕಟ್ಟೆಯ ರಸ್ತೆಯಲ್ಲಿರುವ ತುಂಗಾ ಮೇಲ್ದಂಡೆ ಚಾನಲ್ ಹತ್ತಿರ ಇಬ್ಬರು ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದ್ದು, ತುಂಗಾನಗರ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಬಂಧಿತರಿಂದ ಸುಮಾರು 60,000ರೂ ಮೌಲ್ಯದ 1 ಕೆಜಿ 270 ಗ್ರಾಂ ತೂಕದ ಗಾಂಜಾವನ್ನು ಹಾಗೂ 600/- ರೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









