ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಐದು ವರ್ಷಗಳ ಹಿಂದೆ ನಗರದ ಹೊನ್ನಾಳಿ ರಸ್ತೆಯ ರಾಗಿಗುಡ್ಡ ಕ್ರಾಸ್‌ನ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದೆ.
ಮೊಹಮ್ಮದ್ ನೂರುಲ್ಲಾ ಶಿಕ್ಷೆಗೊಳಗಾದ ವ್ಯಕ್ತಿ. 2021ರ ಮೇ 4ರ ಬೆಳಗಿನ ಜಾವ ರಾಗಿಗುಡ್ಡ ಕ್ರಾಸ್‌ನ ಬಳಿ ಸುನಿಲ್ ಎಂಬುವವರು ಮೋಪೆಡ್‌ನಲ್ಲಿ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದು ಅಡ್ಡಗಟ್ಟಿದ ಇಬ್ಬರು ಚಾಕು ತೋರಿಸಿ ಬೆದರಿಕೆ ಹಾಕಿ ₹500 ನಗದು ಹಾಗೂ ₹12,000 ಮೌಲ್ಯದ ಮೊಬೈಲ್ ಫೋನ್ ದರೋಡೆ ಮಾಡಿದ್ದರು. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ತನಿಖಾಧಿಕಾರಿ ಪಿಐ ಸಂಜೀವ್ ಕುಮಾರ್ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.
Also read: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ | ಸಚಿವ ಕೆ.ಜೆ. ಜಾರ್ಜ್ ಹೇಳಿಕೆ ಸುಳ್ಳು: ಮಾರುತಿ ಗುರೂಜಿ ಆರೋಪ
ಮೊಹಮ್ಮದ್ ನೂರುಲ್ಲಾ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಅಭಯ್ ಧನಪಾಲ್ ಚೌಗಲೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಕೀಲರಾದ ಮಮತಾ ಬಿ.ಎಸ್ ವಾದ ಮಂಡಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









