ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ತೀರ್ಥಹಳ್ಳಿ (Thirthahalli) ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ನಾಳೆ (ಜುಲೈ 7, ಮಂಗಳವಾರ) ರಜೆ ಘೋಷಿಸಲಾಗಿದೆ. ಈ ಕುರಿತು ತಹಸೀಲ್ದಾರ್ ರಂಜಿತ್ ಆದೇಶ ಹೊರಡಿಸಿದ್ದಾರೆ.
ತಾಲೂಕಿನ ವಿವಿಧ ಭಾಗಗಳಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಶೀತ ಗಾಳಿಯೂ ಬೀಸುತ್ತಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
Thirthahalli | ಮುನ್ನೆಚ್ಚರಿಕೆ ವಹಿಸಿ
ಆದೇಶದಂತೆ, ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ-ಕಾಲೇಜುಗಳಿಗೆ ರಜೆ ಅನ್ವಯವಾಗುತ್ತದೆ.
ಇದಲ್ಲದೆ, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ತಹಸೀಲ್ದಾರ್ ಮನವಿ ಮಾಡಿದ್ದಾರೆ. ನದಿ, ಹಳ್ಳಗಳ ಸಮೀಪ ಅನಗತ್ಯವಾಗಿ ತೆರಳದಂತೆ ಹಾಗೂ ಜಿಲ್ಲಾ ಮತ್ತು ತಾಲೂಕು ಆಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ತಿಳಿಸಿದ್ದಾರೆ.
Also Read>> ಕೈಗಾ ಅಣು ವಿದ್ಯುತ್ ಯೋಜನೆಗೆ ಮಹತ್ವದ ಮೈಲಿಗಲ್ಲು | MEIL ಸಾಧನೆ
ಪ್ರಸ್ತುತ ಮಳೆಯ ಪರಿಸ್ಥಿತಿಯನ್ನು ಆಡಳಿತವು ನಿಗಾವಹಿಸುತ್ತಿದ್ದು, ಮುಂದಿನ ಪರಿಸ್ಥಿತಿಯಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











