ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿರಂತರ ಮಳೆಯಿಂದಾಗಿ ಶಿವಮೊಗ್ಗ (Shivamogga) ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮನೆ ಕುಸಿದ ಘಟನೆಗೆ ಸಂಬಂಧಿಸಿ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆ ಪರಿಣಾಮದಿಂದ ಮನೆ ಹಾನಿಗೊಳಗಾಗಿ ಆಶ್ರಯ ಕಳೆದುಕೊಂಡಿರುವ ಕುಟುಂಬವನ್ನು ಭೇಟಿ ಮಾಡಿದ ಶಾಸಕರು, ಅವರ ಅಹವಾಲನ್ನು ಆಲಿಸಿ ಧೈರ್ಯ ತುಂಬಿದರು. ನಂತರ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿ ಪರಿಶೀಲನೆ ನಡೆಸಿ, ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡರು.
Also Read>> MEIL Completes Historic Largest Concrete Pour for PHWR at Kaiga
ಈ ವೇಳೆ ಮಾತನಾಡಿದ ಶಾಸಕರು, “ಕ್ಷೇತ್ರದ ಜನರ ದೈನಂದಿನ ಕಷ್ಟ-ಸುಖಗಳಿಗೆ ತಕ್ಷಣ ಸ್ಪಂದಿಸುವುದು ನಮ್ಮ ಜವಾಬ್ದಾರಿ. ನೈಸರ್ಗಿಕ ವಿಕೋಪಗಳಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ಸಹಾಯ ಮಾಡಬೇಕು” ಎಂದು ಹೇಳಿದರು.
ಅದರ ಜೊತೆಗೆ, ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, “ಮಳೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ಯಾವುದೇ ವಿಳಂಬ ಸಹಿಸುವುದಿಲ್ಲ. ತಕ್ಷಣವೇ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಗರಿಷ್ಠ ಪರಿಹಾರ ಒದಗಿಸುವಂತೆ ಕ್ರಮ ಕೈಗೊಳ್ಳಬೇಕು” ಎಂದು ಆದೇಶಿಸಿದರು.
Also Read>> Dudhsagar | ರೈಲು ಹಳಿಯಲ್ಲಿ ಅಕ್ರಮ ಸಂಚಾರ | 32 ಪ್ರವಾಸಿಗರಿಗೆ ದಂಡ
ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ್, ಎಸ್‌ಸಿ ಮೋರ್ಚಾ ನಗರ ಅಧ್ಯಕ್ಷ ವಿಜಯೇಂದ್ರ, ಕಾರ್ಯದರ್ಶಿ ರಾಘವೇಂದ್ರ, ಮಹಾನಗರ ಪಾಲಿಕೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು, ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











