ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡಿನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ (Bhadra Dam) ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣದಲ್ಲಿ ಗಮನಾರ್ಹ ಏರಿಕೆಯಾಗಿದೆ.
ಸೋಮವಾರ ಬೆಳಿಗ್ಗೆ 4,135 ಕ್ಯೂಸೆಕ್ ಇದ್ದ ಒಳಹರಿವು, ಮಂಗಳವಾರ ಬೆಳಿಗ್ಗೆ ವೇಳೆಗೆ 8,117 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಇದರಿಂದ ಜಲಾಶಯದ ನೀರಿನ ಮಟ್ಟ ಒಂದೇ ದಿನದಲ್ಲಿ ಸುಮಾರು ಒಂದು ಅಡಿಯಷ್ಟು ಹೆಚ್ಚಳ ಕಂಡಿದೆ.
ಗರಿಷ್ಠ 186 ಅಡಿ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸೋಮವಾರ ನೀರಿನ ಮಟ್ಟ 139 ಅಡಿ 6 ಇಂಚು ದಾಖಲಾಗಿತ್ತು. ಒಳಹರಿವು ಹೆಚ್ಚಾದ ಪರಿಣಾಮ ಮಂಗಳವಾರ ಬೆಳಿಗ್ಗೆ 6 ಗಂಟೆ ವೇಳೆಗೆ ನೀರಿನ ಮಟ್ಟ 140 ಅಡಿ 6 ಇಂಚಿಗೆ ಏರಿಕೆಯಾಗಿದೆ.
Also read: ಕೊಲ್ಲೂರು ದೇಗುಲದ ಭಕ್ತೆಯ ಚಿನ್ನ ಕಳ್ಳತನ | ಭದ್ರಾವತಿಯ 3 ಮಹಿಳೆಯರ ಬಂಧನ
ಪ್ರಸ್ತುತ ಜಲಾಶಯದಲ್ಲಿ 27.231 ಟಿಎಂಸಿ ನೀರು ಸಂಗ್ರಹವಿದ್ದು, ಹೊರಹರಿವನ್ನು 212 ಕ್ಯೂಸೆಕ್‌ಗೆ ಸೀಮಿತಗೊಳಿಸಲಾಗಿದೆ. ಕಳೆದ ವರ್ಷ ಇದೇ ದಿನ ಜಲಾಶಯದ ನೀರಿನ ಮಟ್ಟ 170 ಅಡಿ 9 ಇಂಚು ಇತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









