ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಹ್ಯಾದ್ರಿ ವಿಜ್ಞಾನ ಮತ್ತು ಕಲಾ ಕಾಲೇಜುಗಳ ಸ್ನಾತಕೋತ್ತರ (ಪಿಜಿ) ಕೋರ್ಸ್‌ಗಳ ಪ್ರವೇಶಾತಿಯನ್ನು ಪ್ರಸಕ್ತ ಸಾಲಿನ ಅಧಿಸೂಚನೆಯಿಂದ ಕೈಬಿಟ್ಟಿರುವುದು ವಿದ್ಯಾರ್ಥಿ ವಿರೋಧಿ ನಿರ್ಧಾರ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಆಕ್ಷೇಪ ವ್ಯಕ್ತಪಡಿಸಿದರು.
ಈ ಕುರಿತು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರನ್ನು ಭೇಟಿ ಮಾಡಿದ ಅವರು, ಸಹ್ಯಾದ್ರಿ ಕಾಲೇಜುಗಳ ಪಿಜಿ ಪ್ರವೇಶಾತಿಯನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಿ ತಕ್ಷಣ ಪರಿಷ್ಕೃತ ಅಧಿಸೂಚನೆ ಹೊರಡಿಸಲು ಮನವಿ ಸಲ್ಲಿಸಿದರು.
ಎಂ.ಎಸ್‌ಸಿ ಬಯೋಟೆಕ್ನಾಲಜಿ, ಇಂಡಸ್ಟ್ರಿಯಲ್ ಕೆಮಿಸ್ಟ್ರಿ, ಜನರಲ್ ಕೆಮಿಸ್ಟ್ರಿ ಹಾಗೂ ಎಂ.ಎ ರಾಜ್ಯಶಾಸ್ತ್ರ ಕೋರ್ಸ್‌ಗಳ ಪ್ರವೇಶಾತಿಯನ್ನು ಮರುಪ್ರಾರಂಭಿಸುವಂತೆ ಒತ್ತಾಯಿಸಿದರು.
Also read: ವಯನಾಡುನಲ್ಲಿ ಭಾರೀ ಭೂಕುಸಿತ: ಒಬ್ಬರ ಸಾವು, ಹಲವರು ನಾಪತ್ತೆ
ಬಯೋಟೆಕ್ನಾಲಜಿಯಲ್ಲಿ ವಿವಿಯ ಟಾಪ್ 10ರಲ್ಲಿ 5 ರ್ಯಾಂಕ್‌ಗಳು ಹಾಗೂ ರಾಜ್ಯಶಾಸ್ತ್ರದಲ್ಲಿ 3 ಮತ್ತು 5ನೇ ರ್ಯಾಂಕ್‌ಗಳನ್ನು ಪಡೆದಿರುವಂತಹ ಯಶಸ್ವಿ ಕೋರ್ಸ್‌ಗಳನ್ನು ಸ್ಥಗಿತಗೊಳಿಸುವುದು ಅನ್ಯಾಯ ಎಂದರು.
ಗ್ರಾಮೀಣ ವಿದ್ಯಾರ್ಥಿಗಳಿಗೆ ಸಾರಿಗೆ ಮತ್ತು ಆರ್ಥಿಕವಾಗಿ ಸಹಾಯಕವಾಗಿರುವ ಈ ಕಾಲೇಜುಗಳಲ್ಲಿ ಯಾವುದೇ ಆರ್ಥಿಕ ಹೊರೆ ಇಲ್ಲದಿದ್ದರೂ ಪ್ರವೇಶಾತಿ ನಿಲ್ಲಿಸಿರುವುದು ಸರಿಯಲ್ಲ ಎಂದು ಹೇಳಿದರು.
ತಕ್ಷಣ ಪರಿಷ್ಕೃತ ಅಧಿಸೂಚನೆ ಹೊರಡಿಸದಿದ್ದರೆ ವಿದ್ಯಾರ್ಥಿಗಳೊಂದಿಗೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









