ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಕ್ರಮವಾಗಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಿರಣ್ ಅಂಗಡಿ ಅವರ ಮನೆ, ಕಚೇರಿ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮುಂಜಾನೆ ಏಕಕಾಲದಲ್ಲಿ ದಾಳಿ (Lokayukta Raid) ನಡೆಸಿದ್ದಾರೆ.
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಸುಮಾರು ಆರು ಅಧಿಕಾರಿಗಳು ಹಾಗೂ 40ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಿದ್ದು, ವಿವಿಧ ದಾಖಲೆಗಳು, ಆಸ್ತಿ-ಪಾಸ್ತಿ ವಿವರಗಳು ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
Also Read>> WFI-IIS ಮೈತ್ರಿ ಮುಂದುವರಿಕೆ: 2029 ರವರೆಗೆ ಕುಸ್ತಿಪಟುಗಳಿಗೆ ವಿಶ್ವ ದರ್ಜೆಯ ತರಬೇತಿ
ಮಾಹಿತಿಯ ಪ್ರಕಾರ, ಶಿವಮೊಗ್ಗದಲ್ಲಿರುವ ಕಿರಣ್ ಅಂಗಡಿ ಅವರ ಕಚೇರಿಯಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ವೇಳೆ ಧಾರವಾಡದಲ್ಲಿರುವ ಅವರ ನಿವಾಸ ಹಾಗೂ ಪತ್ನಿ ನಂದಾ ಅವರ ಹೆಸರಿನಲ್ಲಿರುವ ಕೈಗಾರಿಕಾ ಘಟಕದಲ್ಲಿಯೂ ಶೋಧ ಕಾರ್ಯ ಮುಂದುವರಿದಿದೆ. ಅಲ್ಲದೆ ಚಿತ್ರದುರ್ಗ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ದಾಳಿ ನಡೆದಿದೆ.
ಕಿರಣ್ ಅಂಗಡಿ ಅವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ದಾಳಿಯ ವೇಳೆ ಬ್ಯಾಂಕ್ ದಾಖಲೆಗಳು, ಸ್ಥಿರಾಸ್ತಿ ದಾಖಲೆಗಳು ಹಾಗೂ ಹೂಡಿಕೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಕಾರ್ಯಾಚರಣೆ ಇನ್ನೂ ಮುಂದುವರಿದಿದ್ದು, ಪರಿಶೀಲನೆ ಪೂರ್ಣಗೊಂಡ ಬಳಿಕ ವಶಪಡಿಸಿಕೊಂಡ ದಾಖಲೆಗಳು ಮತ್ತು ತನಿಖೆಯಲ್ಲಿ ಪತ್ತೆಯಾಗುವ ಮಾಹಿತಿಯ ಆಧಾರದಲ್ಲಿ ಲೋಕಾಯುಕ್ತದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.
Lokayukta Raids ACF Kiran Angadi’s Properties in Shivamogga
In connection with allegations of amassing disproportionate assets, Lokayukta officials on Wednesday conducted simultaneous raids at five locations linked to Assistant Conservator of Forests (ACF) Kiran Angadi, who is serving in the Research and Development wing of the Forest Department in Shivamogga.
The operation, led by senior Lokayukta officials, involved around six officers and more than 40 staff members. Authorities are currently examining various documents, including records related to assets, financial transactions, and other relevant materials.
According to sources, officials are scrutinizing documents at Angadi’s office in Shivamogga. Simultaneously, searches are being carried out at his residence in Dharwad and at an industrial unit registered in the name of his wife, Nanda. Raids are also underway at other locations, including Chitradurga, taking the total number of sites to five.
The action follows allegations that Kiran Angadi accumulated assets disproportionate to his known sources of income. The operation in Shivamogga is being conducted under the leadership of Lokayukta DySP Chandrashekhar. During the raids, officials are verifying bank records, property documents, and investment-related papers.
The operation is still in progress. An official statement from the Lokayukta is expected after the verification process is completed, based on the documents seized and findings of the investigation.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










