ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಬೆದರಿಕೆಯ ಆರೋಪದ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಶಿವಮೊಗ್ಗ ಜೈಲಿಗೆ ಕಳುಹಿಸಿದ್ದಾರೆ.
ಆಸಿಫ್ ಎಂಬ ಆರೋಪಿಯು ಸಾಮಾಜಿಕ ಜಾಲತಾಣದ ಮೂಲಕ ಸುಮಾರು ಮೂರು ತಿಂಗಳ ಹಿಂದೆ ಯುವತಿಯನ್ನು ಪರಿಚಯಿಸಿಕೊಂಡಿದ್ದಾನೆ. ಬಳಿಕ ಆಕೆಯ ಫೋಟೋವನ್ನು ಅಸಭ್ಯವಾಗಿ ಎಡಿಟ್ ಮಾಡಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ, ಅನೇಕ ಬಾರಿ ಬಲವಂತವಾಗಿ ದೈಹಿಕ ಸಂಪರ್ಕ ಸಾಧಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆಸಿಫ್ ಜೊತೆಗೆ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಆರೋಪಿ ಸಾಹಿಲ್, ಆಸಿಫ್ ಮತ್ತು ಯುವತಿಯೊಂದಿಗೆ ಇರುವ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಸಿ, ಯುವತಿಯ ಮೇಲೆ ಅಸಭ್ಯವಾಗಿ ಕೈಹಾಕಿದ್ದಾನೆ. ಪ್ರತಿರೋಧಿಸಿದಾಗ ಇಡೀ ಗ್ರಾಮದವರಿಗೆ ವಿಷಯವನ್ನು ತಿಳಿಸುವುದಾಗಿ ಬೆದರಿಕೆ ನೀಡಿದ್ದಾನೆ.
Also read: ಇನ್ನೂ ಆರು ದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ: ಶಾಸಕ ಚನ್ನಬಸಪ್ಪ
ಮೂರನೇ ಆರೋಪಿ ಸುಹೇಲ್, ಯುವತಿಯ ಮೊಬೈಲ್‌ಗೆ ಅಸಭ್ಯ ಸಂದೇಶಗಳನ್ನು ಕಳುಹಿಸಿ, ಕಾಲೇಜಿಗೆ ಹೋಗುವ ಮತ್ತು ಬರುವ ಸಮಯದಲ್ಲಿ ಹಿಂಬಾಲಿಸಿ ನಿರಂತರ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








