ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಭಾರತ ಸರ್ಕಾರ, ಜುಲೈ 13ರಂದು ರಾಷ್ಟ್ರೀಯ ಶೋಕಾಚರಣೆ ದಿನವನ್ನು ಘೋಷಿಸಿದೆ.
ಈ ಹಿನ್ನೆಲೆಯಲ್ಲಿ ದೇಶಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಜೊತೆಗೆ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂದು ಸರ್ಕಾರ ತಿಳಿಸಿದೆ.
74 ವರ್ಷದ ಕತಾರ್ನ ಮಾಜಿ ಅಮೀರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಅವರನ್ನು ದಾರ್ಶನಿಕ ನಾಯಕ ಹಾಗೂ ಭಾರತದ ನಿಜವಾದ ಸ್ನೇಹಿತ ಎಂದು ಕರೆದಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ ಅವರು, “ಕತಾರ್ನ ಪಿತಾಮಹ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನದಿಂದ ನಮಗೆ ತೀವ್ರ ದುಃಖವಾಗಿದೆ. ಅವರು ಕತಾರ್ ಅನ್ನು ಅಭಿವೃದ್ಧಿ ಮತ್ತು ಸಮೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ದ ದಾರ್ಶನಿಕ ನಾಯಕರು. ನಾವು ಅವರನ್ನು ನಿಜವಾದ ಸ್ನೇಹಿತನಾಗಿ ನೆನಪಿಸಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.
Also read: Bengaluru | ಚಿಲ್ಲರೆ ವಿವಾದಕ್ಕೆ ಟ್ವಿಸ್ಟ್ | QR ಪಾವತಿ ಬಗ್ಗೆ ಸುರೇಶ್ ಕುಮಾರ್ ಪ್ರಶ್ನೆ
“ಫೆಬ್ರವರಿ 2024ರಲ್ಲಿ ಕತಾರ್ಗೆ ನನ್ನ ಕೊನೆಯ ಭೇಟಿಯ ವೇಳೆ ಅವರನ್ನು ಭೇಟಿಯಾಗುವ ಅವಕಾಶ ನನಗೆ ದೊರಕಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಪ್ರಧಾನಿ ಮೋದಿ ಪ್ರಾರ್ಥಿಸಿದ್ದಾರೆ.
ಇನ್ನೊಂದೆಡೆ, ಸಂಸದೀಯ ವ್ಯವಹಾರಗಳು ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ಶೀಘ್ರದಲ್ಲೇ ಕತಾರ್ಗೆ ಭೇಟಿ ನೀಡುವ ನಿರೀಕ್ಷೆಯಿದೆ.
ಶೇಖ್ ಹಮದ್ ಯಾರು?
ಯುಕೆಯಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ, ಶೇಖ್ ಹಮದ್ 1971ರಲ್ಲಿ ಕತಾರ್ ಸಶಸ್ತ್ರ ಪಡೆಗಳನ್ನು ಸೇರಿದರು. ಬಳಿಕ 1995ರಲ್ಲಿ ರಕ್ತರಹಿತ ದಂಗೆಯ ಮೂಲಕ ಅಧಿಕಾರವನ್ನು ವಶಪಡಿಸಿಕೊಂಡು ಕತಾರ್ನ ಆಡಳಿತವನ್ನು ಸ್ವೀಕರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








