No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಲಾತೀತ ದೃಷ್ಟಿಕೋನದಿಂದ ಬದುಕನ್ನು ಅವಲೋಕಿಸಿ: ಬಿದರಗೋಡು ನಾಗೇಶ್‌

ಎಚ್.ಎಸ್. ರುದ್ರಪ್ಪ ಪಿಯು ಕಾಲೇಜಿನಲ್ಲಿ ಕಸಾಪ ದತ್ತಿ ಉಪನ್ಯಾಸ  

kalpa News by kalpa News
July 14, 2026
in ಶಿವಮೊಗ್ಗ
0
ಕಾಲಾತೀತ ದೃಷ್ಟಿಕೋನದಿಂದ ಬದುಕನ್ನು ಅವಲೋಕಿಸಿ: ಬಿದರಗೋಡು ನಾಗೇಶ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಕಾಲಾತೀತ ದೃಷ್ಟಿಕೋನದಿಂದ ಬದುಕನ್ನು ಅವಲೋಕಿಸಿ, ಪ್ರತಿಯೊಂದು ವಿಚಾರವನ್ನೂ ವಿವೇಕದ ತಕ್ಕಡಿಯಲ್ಲಿ ತೂಗಿ ಪ್ರಶ್ನಿಸುವ ಮನೋಭಾವವೇ ಕುವೆಂಪು ಅವರ ಚಿಂತನೆಯ ಸಾರವಾಗಿದ್ದು, ಅದನ್ನು ಯುವ ಸಮೂಹ ಅಳವಡಿಸಿಕೊಳ್ಳಬೇಕು ಎಂದು ಲೇಖಕ ಬಿದರಗೋಡು ನಾಗೇಶ್‌ ಹೇಳಿದರು.

ನಗರದ ಎಚ್.ಎಸ್‌ ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಏರ್ಪಡಿಸಿದ್ದ ದಿ. ಡಿ.ಆರ್. ರತ್ನಾಕರ ಸ್ಮಾರಕ ದತ್ತಿ ದಾನಿಗಳಾದ ಅಮರೇಂದ್ರ ಕಿರೀಟಿ ಅವರ ಆಶಯದಂತೆ “ಯುವಜನತೆಗೆ ವೈಚಾರಿಕ ಜಾಗೃತಿಗಾಗಿ ಕುವೆಂಪು ಕರೆ” ವಿಷಯದ ಕುರಿತು ದತ್ತಿ ಉಪನ್ಯಾಸದಲ್ಲಿ ಮಾತನಾಡಿದರು.
ಕುವೆಂಪು ಅವರು ಯುವಜನತೆಗೆ ನೀಡಿದ ‘ಆತ್ಮಶ್ರೀಗಾಗಿ ನಿರಂಕುಶ ಮತಿಗಳಾಗಿ’ ಎಂಬ ಕರೆ ಕೇವಲ ಘೋಷವಾಕ್ಯವಲ್ಲ, ಅದು ಸ್ವತಂತ್ರ ಚಿಂತನೆಯ ಬದುಕಿನ ದಿಕ್ಸೂಚಿ. ನಮ್ಮ ಬುದ್ಧಿಗೆ ಕಟ್ಟಿಹಾಕಿರುವ ಮಿತಿಗಳನ್ನು ಮೀರಿ ಯೋಚಿಸುವ ಧೈರ್ಯ ಬೆಳೆಸಿಕೊಳ್ಳಬೇಕು. ಅವಿವೇಕ ಮತ್ತು ಮೌಢ್ಯಗಳಿಂದ ಆವರಿಸಿರುವ ಮನಸ್ಥಿತಿಯಿಂದ ಸಮಾಜ ಹೊರಬರಬೇಕಾದ ಕಾಲ ಇದು.

Also read: ಗ್ರಾಹಕರಿಗೆ ಗುಣಮಟ್ಟದ ಪದಾರ್ಥ ನೀಡಿದಾಗ ಗೌರವ, ಪ್ರೀತಿ ಹೆಚ್ಚುತ್ತದೆ: ಸುರೇಶ್ ಋಗ್ವೇದಿ

ಧಾರ್ಮಿಕ ಆಚರಣೆಗಳು ಮಾನವನ ಬದುಕಿನಲ್ಲಿ ಸಂಭ್ರಮ ಮತ್ತು ಸಹಬಾಳ್ವೆಯ ಸಂಕೇತವಾಗಬೇಕು. ಕಾಲಾತೀತ ದೃಷ್ಟಿಯಿಂದ ಯೋಚಿಸುವ, ಪ್ರತಿಯೊಂದು ವಿಚಾರವನ್ನೂ ಪ್ರಶ್ನಿಸುವ ಮನೋವೃತ್ತಿಯೇ ಕುವೆಂಪು ಅವರ ಚಿಂತನೆಯ ಸಾರ ಎಂದು ಹೇಳಿದರು.

ಶ್ರೀ ಆನಂದಪುರ ಜಗದ್ಗುರು ಗುರುಬಸವ ಮಹಾಸ್ವಾಮಿಗಳ ಸ್ಮಾರಕ ದತ್ತಿಯ ಆಶಯದಂತೆ “ಕೆಳದಿ ಸಂಸ್ಥಾನದ ಧರ್ಮ ಸಮನ್ವಯತೆ” ಕುರಿತು ಇತಿಹಾಸ ಸಂಶೋಧಕರಾದ ಡಾ. ಕೆಳದಿ ವೆಂಕಟೇಶ್ ಜೋಯ್ಸ್ ಮಾತನಾಡಿ, 1499 ರಿಂದ 1763ರವರೆಗೆ ಹದಿನೇಳು ರಾಜರು ಹಾಗೂ ಇಬ್ಬರು ರಾಣಿಯರು ಕೆಳದಿ ಸಾಮ್ರಾಜ್ಯವನ್ನು ಸಮರ್ಥವಾಗಿ ಆಳಿದ ಇತಿಹಾಸವನ್ನು ವಿವರಿಸಿದರು.
ಕೆಳದಿ ಶಿವಪ್ಪ ನಾಯಕರು, ಶಿವಮೊಗ್ಗದ ಇತಿಹಾಸದ ಹೆಮ್ಮೆಯ ಪ್ರತೀಕ. ಹಿಂದೂ, ಇಸ್ಲಾಂ, ಕ್ರೈಸ್ತ ಹಾಗೂ ಜೈನ ಧರ್ಮಗಳ ನಡುವೆ ಸಮನ್ವಯತೆ ಮತ್ತು ಪರಸ್ಪರ ಗೌರವವನ್ನು ಬೆಳೆಸಿದ ಆಡಳಿತ ಕೆಳದಿ ಅರಸರ ವೈಶಿಷ್ಟ್ಯವಾಗಿತ್ತು. ಮತೀಯ ಪ್ರಚೋದನೆಗೆ ಅವಕಾಶ ನೀಡದೆ ಸರ್ವಧರ್ಮ ಸಮಭಾವವನ್ನು ಉಳಿಸಿಕೊಂಡ ಆಡಳಿತ ಇಂದಿನ ಸಮಾಜಕ್ಕೂ ಮಾದರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕಸಾಪ ಜಿಲ್ಲಾಧ್ಯಕ್ಷ ಡಿ. ಮಂಜುನಾಥ ಮಾತನಾಡಿ, ನೀವು ವಿದ್ಯಾಭ್ಯಾಸ ಮಾಡುತ್ತಿರುವ ಎನ್‌ಇಎಸ್ ಶಿಕ್ಷಣ ಸಂಸ್ಥೆ ಸ್ವಾತಂತ್ರ್ಯ ಹೋರಾಟಗಾರರ ಕನಸಿನ ಫಲ. ಶಿಕ್ಷಣವೆಂದರೆ ಕೇವಲ ಪದವಿ ಪಡೆಯುವುದಲ್ಲ. ಅದು ವ್ಯಕ್ತಿತ್ವ ರೂಪಿಸುವ ಪ್ರಕ್ರಿಯೆ. ನಿಮ್ಮ ನಡೆ-ನುಡಿ, ಸಂಸ್ಕಾರ ಮತ್ತು ಜ್ಞಾನ ಸಮಾಜಕ್ಕೆ ಮಾದರಿಯಾಗುವಂತಿರಬೇಕು. ಆಗಲೇ ಶಿಕ್ಷಣಕ್ಕೂ, ಶಿಕ್ಷಣ ಪಡೆದ ಪ್ರಮಾಣಪತ್ರಕ್ಕೂ ನಿಜವಾದ ಗೌರವ ದೊರೆಯುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಆರ್. ಆದಿತ್ಯ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಜಿಲ್ಲಾ ಕಾರ್ಯದರ್ಶಿ ಡಿ. ಗಣೇಶ್ ಸ್ವಾಗತಿಸಿ, ಉಪನ್ಯಾಸಕ ರವಿ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   JNNCE ShivamoggaKalpa News Advertising DisclaimerKalahamsa Infotech private limited   

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗ್ರಾಹಕರಿಗೆ ಗುಣಮಟ್ಟದ ಪದಾರ್ಥ ನೀಡಿದಾಗ ಗೌರವ, ಪ್ರೀತಿ ಹೆಚ್ಚುತ್ತದೆ: ಸುರೇಶ್ ಋಗ್ವೇದಿ

Next Post

ಶಿವಮೊಗ್ಗ | ವಾರ್ಡ್‍ಗಳಿಗೆ ಕಾಂಗ್ರೆಸ್ ಮುಖಂಡರ ಭೇಟಿ – SIR ಪ್ರಗತಿ ಪರಿಶೀಲನೆ

kalpa News

kalpa News

Next Post
ಶಿವಮೊಗ್ಗ | ವಾರ್ಡ್‍ಗಳಿಗೆ ಕಾಂಗ್ರೆಸ್ ಮುಖಂಡರ ಭೇಟಿ – SIR ಪ್ರಗತಿ ಪರಿಶೀಲನೆ

ಶಿವಮೊಗ್ಗ | ವಾರ್ಡ್‍ಗಳಿಗೆ ಕಾಂಗ್ರೆಸ್ ಮುಖಂಡರ ಭೇಟಿ - SIR ಪ್ರಗತಿ ಪರಿಶೀಲನೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL