ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಾದ್ಯಂತ ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ (Amrit Bharat Station) ಪುನರಾಭಿವೃದ್ಧಿಗೊಂಡ 75 ರೈಲು ನಿಲ್ದಾಣಗಳನ್ನು ಲೋಕಾರ್ಪಣೆ ಮಾಡಿದರು.
ಇದೇ ಸಂದರ್ಭದಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಬಾದಾಮಿ ರೈಲು ನಿಲ್ದಾಣ ಸಹ (ಅಳ್ನಾವರ ಮತ್ತು ಕೊಪ್ಪಳ ರೈಲು ನಿಲ್ದಾಣ ಸೇರಿದಂತೆ) ಉದ್ಘಾಟಿಸಲಾಯಿತು.
ಬಾದಾಮಿ ರೈಲು ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿ. ಸೋಮಣ್ಣ ರೈಲ್ವೆ ಹಾಗೂ ಜಲಶಕ್ತಿ ಖಾತೆಯ ರಾಜ್ಯ ಸಚಿವರು ಮಾತನಾಡಿ, ಪುನರಾಭಿವೃದ್ಧಿಗೊಂಡ ಬಾದಾಮಿ ರೈಲು ನಿಲ್ದಾಣವು ಆಧುನಿಕ ಭಾರತೀಯ ರೈಲ್ವೆಯ ಹೊಸ ರೂಪವನ್ನು ಪ್ರತಿಬಿಂಬಿಸುವಂತೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣಗೊಂಡಿದೆ. 
Amrit Bharat Station
ನಿಲ್ದಾಣದಲ್ಲಿ ವಿಶಾಲ ಹಾಗೂ ಸುಸಜ್ಜಿತ ನಿರೀಕ್ಷಣಾ ಕೊಠಡಿಗಳು, ದಿವ್ಯಾಂಗ ಸ್ನೇಹಿ ಶೌಚಾಲಯ,ಆಕರ್ಷಕ ಕಟ್ಟಡ ಮುಂಭಾಗ, ಉತ್ತಮ ಬೆಳಕಿನ ವ್ಯವಸ್ಥೆ, ಸುಧಾರಿತ ಪ್ರಯಾಣಿಕರ ಸೌಲಭ್ಯಗಳು ಹಾಗೂ ಅತ್ಯುತ್ತಮ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದರು.
ರೈಲ್ವೆ ಇಲಾಖೆಯು ವೇಗದ ಸಂಚಾರ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಮತ್ತು ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡುತ್ತದೆ ಎಂದರು.
ರೈಲ್ವೆ ಸಾರಿಗೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ಆಗಿದ್ದು, ಇದಕ್ಕೆ 7 ಹೈಸ್ಪೀಡ್ ರೈಲು ಸಂಚಾರಕ್ಕೆ ಸಿದ್ಧಪಡಿಸಿದ ಕ್ರಿಯಾ ಯೋಜನೆ ಸಾಕ್ಷಿಯಾಗಿದೆ ಎಂದು ವಿವರಿಸಿದರು.
ಬಾಗಲಕೋಟ-ಕುಡಚಿ ರೈಲು ಮಾರ್ಗದ ಕುರಿತು ಭೂಮಿ ಹಸ್ತಾಂತರಕ್ಕಾಗಿ ರಾಜ್ಯ ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯಂತೆ ಭಾರತೀಯ ರೈಲ್ವೆಯನ್ನು ವಿಶ್ವದ ಅತ್ಯುತ್ತಮ ರೈಲು ವ್ಯವಸ್ಥೆಯನ್ನಾಗಿ ರೂಪಿಸುವ ಪರಿಕಲ್ಪನೆಯಲ್ಲಿ ಜಾರಿಗೊಳಿಸುವ, ಅಮೃತ್ ಭಾರತ್ ಸ್ಟೇಷನ್ ಯೋಜನೆಯ (ABSS) ಅಡಿಯಲ್ಲಿ ಇಂದು ದೇಶದಾದ್ಯಂತ 25 ಸಾವಿರ ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿಗೊಂಡ 75 ಅಮೃತ್ ಭಾರತ್ ರೈಲು ನಿಲ್ದಾಣಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ ಎಂದರು.
ಪಿ.ಸಿ. ಗದ್ದಿಗೌಡರ, ಬಾಗಲಕೋಟೆ ಲೋಕಸಭೆ ಸಂಸದರು, ನಾರಾಯಣಸಾ ಕೆ. ಭಾಂಡಗೆ ರಾಜ್ಯಸಭೆ ಸಂಸದರು, ಹನುಮಂತ ನಿರಾಣಿ ವಿಧಾನ ಪರಿಷತ್ ಸದಸ್ಯರು, ಜಗದೀಶ ಗುಡಗುಂಟಿ, ಶಾಸಕರು ಜಮಖಂಡಿ, ಮುರುಗೇಶ ನಿರಾಣಿ, ಮಾಜಿ ಸಚಿವರು, ದೊಡ್ಡನಗೌಡ ಪಾಟೀಲ ಮಾಜಿ ಶಾಸಕರು ಹುನಗುಂದ ಸೇರಿದಂತೆ ಬೇಲಾ ಮೀನಾ, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಹಾಗೂ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









Comments 1