ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರ (Shikaripura) ತಾಲ್ಲೂಕಿನಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
Also Read>> Rare ‘Artery of Percheron’ Stroke | 65ರ ವೃದ್ಧನಿಗೆ NH ಆಸ್ಪತ್ರೆ ವೈದ್ಯರ ಯಶಸ್ವಿ ಚಿಕಿತ್ಸೆ
2024ರ ಅಕ್ಟೋಬರ್ 18ರಂದು ರಾತ್ರಿ ವೇಳೆ, ಶಿಕಾರಿಪುರ ತಾಲ್ಲೂಕಿನ 23 ವರ್ಷದ ವ್ಯಕ್ತಿಯೊಬ್ಬನು 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣವನ್ನು ಆಗಿನ ತನಿಖಾಧಿಕಾರಿಯಾಗಿದ್ದ ಪಿಎಸ್ಐ ಪುಷ್ಪಾ ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
Shikaripura | FTSC-1ಯಲ್ಲಿ ವಾದ
ಪ್ರಕರಣದ ವಿಚಾರಣೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1)ದಲ್ಲಿ ನಡೆಯಿತು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ವಾದ ಮಂಡಿಸಿದರು.
ಆರೋಪದ ದೃಢೀಕರಣದ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು 2026ರ ಜುಲೈ 20ರಂದು ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ಆದೇಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









