ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದಸರಾ ಮಹೋತ್ಸವದಲ್ಲಿ ಹುಲಿವೇಷ ಧರಿಸಿ ಅದ್ಭುತ ಪ್ರದರ್ಶನಗಳ ಮೂಲಕ ಕಲಾಭಿಮಾನಿಗಳನ್ನು ರಂಜಿಸುತ್ತಿದ್ದ ಯುವ ಕಲಾವಿದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆಯಲ್ಲಿ ನಡೆದಿದೆ.
ಸೀಬಿನಕೆರೆ ನಿವಾಸಿ ರಾಕೇಶ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ರಾಕೇಶ್ ಮೂಲತಃ ತೀರ್ಥಹಳ್ಳಿಯವರಾಗಿದ್ದು, ಉಡುಪಿಯಲ್ಲಿ ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ನೃತ್ಯ ಪ್ರತಿಭೆ ಹಾಗೂ ತರಬೇತಿಯ ಮೂಲಕ ಅನೇಕ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು.
Also read>> Shivamogga JNNCE ‘ಯುಗ್ಮಾ ಟೆಕ್ಫೆಸ್ಟ್-2.0’ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್
ಕಳೆದ ಮೂರು–ನಾಲ್ಕು ವರ್ಷಗಳಿಂದ ತೀರ್ಥಹಳ್ಳಿಯಲ್ಲಿ ವಿಜೃಂಭಣೆಯಿಂದ ನಡೆಯುವ ದಸರಾ ಮಹೋತ್ಸವದಲ್ಲಿ ಹುಲಿವೇಷ ಧರಿಸಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಸಾರ್ವಜನಿಕರ ಗಮನ ಸೆಳೆದಿದ್ದರು. ಅವರ ನೃತ್ಯ ಪ್ರದರ್ಶನಗಳು ದಸರಾ ಆಚರಣೆಯ ಪ್ರಮುಖ ಆಕರ್ಷಣೆಯಾಗಿದ್ದವು.
ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತು ತನಿಖೆ ಮುಂದುವರಿದಿದೆ.
ರಾಕೇಶ್ ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಸ್ನೇಹಿತರು ಹಾಗೂ ಕಲಾಭಿಮಾನಿಗಳಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







