ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಶ್ರೀ ಜಗದ್ಗುರು ಆದಿ ಶಂಕರಾಚಾರ್ಯರ ಕುರಿತು ಸಾಮಾಜಿಕ ಜಾಲತಾಣಗಳು ಹಾಗೂ ಸಾರ್ವಜನಿಕ ವೇದಿಕೆಗಳಲ್ಲಿ ಅವಹೇಳನಕಾರಿ ಮತ್ತು ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲಾ ಬ್ರಾಹ್ಮಣ ಸಮಾಜ ಹಾಗೂ ಶಂಕರ ತತ್ವ ಪ್ರಕಾಶನ ಸಮಿತಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.
ಕೆಲವು ವ್ಯಕ್ತಿಗಳು ಮತ್ತು ಸಂಘಟಕರು ಉದ್ದೇಶಪೂರ್ವಕವಾಗಿ ಶ್ರೀ ಶಂಕರಾಚಾರ್ಯರನ್ನು ನಿಂದಿಸುವ ಮೂಲಕ ಅದ್ವೈತ ಸಿದ್ಧಾಂತಕ್ಕೆ ಅಗೌರವ ತೋರಿಸುತ್ತಿದ್ದು, ದೇಶಾದ್ಯಂತ ಶಂಕರರ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಹರಿಕಥೆ ಸೇರಿದಂತೆ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಭಾಷಣಗಳು ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ಹರಡುವ ಮೂಲಕ ಸಮಾಜದಲ್ಲಿ ಅಶಾಂತಿ ಮತ್ತು ಒಡಕು ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಸಂಘಟನೆಗಳ ಮುಖಂಡರು ಆತಂಕ ವ್ಯಕ್ತಪಡಿಸಿದರು.
Also read>> Onam Festival | ಎರ್ನಾಕುಳಂ–ಬೆಂಗಳೂರು ವಿಶೇಷ ರೈಲು ಸಂಚಾರ
ಇಂತಹ ಹೇಳಿಕೆಗಳು ಮತ್ತು ಭಾಷಣಗಳನ್ನು ನೀಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಅವಹೇಳನಕಾರಿ ವಿಷಯಗಳನ್ನು ತಕ್ಷಣವೇ ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ತಹಸೀಲ್ದಾರ್ ಉಷಾ ಅವರು ಮನವಿ ಸ್ವೀಕರಿಸಿ, ವಿಷಯವನ್ನು ಸರ್ಕಾರ ಹಾಗೂ ಮೇಲಾಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮಕ್ಕೆ ಶಿಫಾರಸು ಮಾಡುವುದಾಗಿ ಭರವಸೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









