No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾಜದ ನೈಜ ಸಮಸ್ಯೆಗಳಿಗೆ ಸ್ಪಂದಿಸುವ ಎಐ ಪರಿಹಾರಗಳನ್ನು ರೂಪಿಸಿ: ರುದ್ರೇಗೌಡ ಕರೆ

JNNCE: 'ಯುಗ್ಮಾ ಟೆಕ್‌ಫೆಸ್ಟ್-2.0' ಎಐ ಹ್ಯಾಕಥಾನ್ ಉದ್ಘಾಟನೆ

kalpa News by kalpa News
July 24, 2026
in ಶಿವಮೊಗ್ಗ
0
JNNCE: 'Yugma Techfest-2.0' AI Hackathon Inauguration
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಯುವ ತಂತ್ರಜ್ಞರು ಸಮಾಜದ ನೈಜ ಸಮಸ್ಯೆಗಳನ್ನು ಗುರುತಿಸಿ, ಜನಸಾಮಾನ್ಯರ ಜೀವನಮಟ್ಟವನ್ನು ಸುಧಾರಿಸುವಂತಹ ನಾವೀನ್ಯ ಎಐ ಆಧಾರಿತ ಪರಿಹಾರಗಳನ್ನು ರೂಪಿಸಿ ಎಂದು ವಿಧಾನಪರಿಷತ್ತಿನ ಮಾಜಿ ಸದಸ್ಯರೂ ಆದ ಉದ್ಯಮಿ ಎಸ್. ರುದ್ರೇಗೌಡ ಕರೆ ನೀಡಿದರು‌‌

ನಗರದ ಜೆ.ಎನ್.ಎನ್ ಇಂಜಿನಿಯರಿಂಗ್‌ ಕಾಲೇಜಿನ ಇನ್ಫಾರ್ಮೇಷನ್ ಸೈನ್ಸ್ ವಿಭಾಗ ಹಾಗೂ ಐಇಇಇ ಕಂಪ್ಯೂಟರ್ ಸೊಸೈಟಿ ವಿದ್ಯಾರ್ಥಿ ಘಟಕದ ಸಹಯೋಗದಲ್ಲಿ ಶುಕ್ರವಾರ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0 ಮೇದದೃಷ್ಟಿ’ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್ ಉದ್ಘಾಟಿಸಿ ಮಾತನಾಡಿದರು.
ಇಂಜಿನಿಯರಿಂಗ್ ವಿದ್ಯಾರ್ಥಿಗಳು ಭವಿಷ್ಯದ ನವೋದ್ಯಮಿಗಳಾಗಿ, ತಂತ್ರಜ್ಞಾನ ನಾಯಕರಾಗಿ ಬದಲಾಗಬೇಕು. ಅಂತಹ ಬದಲಾವಣೆಗೆ ಹ್ಯಾಕಥಾನ್ ಅದ್ಭುತ ವೇದಿಕೆ. ಭಾರತವು ಸಾಫ್ಟ್‌ವೇರ್‌ ಕ್ಷೇತ್ರದಲ್ಲಿ ಅತ್ಯಂತ ಗಮನಾರ್ಹ ಸಾಧನೆಯನ್ನು ಮಾಡಿದೆ ಎಂಬುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ.

Also read: 50 ವರ್ಷಗಳ ಸಂಭ್ರಮದಲ್ಲಿ Maaza: ವಿಶೇಷ ಅಂಚೆ ಕವರ್ ಬಿಡುಗಡೆ

1970ರ ದಶಕದ ಮಧ್ಯಭಾಗದಲ್ಲಿ ಕಂಪ್ಯೂಟರ್‌ ತಂತ್ರಜ್ಞಾನ ಆರಂಭವಾದ ದಿನಗಳಿಂದ ಹಿಡಿದು ಇಂದಿನ ಕೃತಕ ಬುದ್ಧಿಮತ್ತೆ ಯುಗದವರೆಗೆ ನಮ್ಮ ದೇಶವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನವನ್ನು ಗಳಿಸಿದೆ. ಇಂದು ಎಐ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದರೂ ಪ್ರತಿಭಾವಂತ ಸಾಫ್ಟ್‌ವೇರ್‌ ವೃತ್ತಿಪರರ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದ್ದು, ನಿಮ್ಮಂತಹ ಯುವ ನವೋದ್ಯಮಿಗಳಿಗೆ ಅಪಾರ ಅವಕಾಶಗಳು ತೆರೆದುಕೊಳ್ಳುತ್ತಿವೆ.

JNNCE Shivamoggaಜಗತ್ತಿನ ಅತಿದೊಡ್ಡ ಗ್ರಾಹಕ ಮಾರುಕಟ್ಟೆಗಳಲ್ಲಿ ಭಾರತವೂ ಒಂದಾಗಿದೆ. ನಮ್ಮ ದೇಶದಲ್ಲಿಯೇ ಅಪಾರ ಅವಕಾಶಗಳಿವೆ. ಆದ್ದರಿಂದ ನಿಮ್ಮ ಜ್ಞಾನ, ಕೌಶಲ್ಯ ಮತ್ತು ಸೃಜನಶೀಲತೆಯನ್ನು ಭಾರತದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಬಳಸಿಕೊಳ್ಳಿ. ನಿಮ್ಮಲ್ಲಿ ಹಲವರಿಗೆ ವಿದೇಶಗಳಲ್ಲಿ ಕೆಲಸ ಮಾಡುವ ಅವಕಾಶಗಳು ದೊರೆಯಬಹುದು. ಆದರೆ ನಿಮ್ಮ ಪ್ರತಿಭೆಯಿಂದ ನಮ್ಮ ದೇಶದಲ್ಲಿಯೇ ಮಹತ್ತರ ಬದಲಾವಣೆಗಳನ್ನು ತರಲು ಸಾಧ್ಯ ಎಂಬುದನ್ನು ಎಂದಿಗೂ ಮರೆಯಬೇಡಿ ಎಂದು ಕಿವಿಮಾತು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ಯುಗ್ಮಾ ಎಂಬ ಶೀರ್ಷಿಕೆಯು ಕೂಡುವಿಕೆಯ ಸಂಕೇತವಾಗಿದೆ. ಪ್ರಾಯೋಗಿಕ ಜ್ಞಾನ ನೀಡುವಂತಹ ಸಾಧಕರ ಒಡನಾಟದಿಂದ ನಮ್ಮಲ್ಲಿ ಮತ್ತಷ್ಟು ಜ್ಞಾನ ವಿಕಸನಗೊಳ್ಳಲಿದೆ. ಎಐ ಎಲ್ಲಾ ರಂಗದಲ್ಲಿ ಅಳವಡಿಸಿಕೊಳ್ಳಲಾಗಿದೆ ಮತ್ತು ಪರಿಣಾಮಕಾರಿ ಫಲಿತಾಂಶ ಪಡೆಯಲಾಗುತ್ತಿದೆ. ಅದರೇ ಎಐ ಮನುಷ್ಯನಿಗೆ ಭಸ್ಮಾಸುರನಂತೆ ಕಾಡದಿರಲಿ. ಆವಿಷ್ಕಾರಗಳು ಬದುಕಿಗೆ ಪೂರಕವಾಗಿರಬೇಕು.

ಈ ನೆಲದ ಋಣ ತೀರಿಸುವತ್ತ ಯುವಸಮೂಹ ಗಮನಹರಿಸಬೇಕಿದೆ. ಪರ ಊರುಗಳಿಗೆ ಅವಕಾಶಗಳಿಗಾಗಿ ಹಾರದೆ, ಸುತ್ತಲಿನ ವಾತಾವರಣ ಬಳಸಿಕೊಂಡು ನಮ್ಮ ಊರಿನಲ್ಲಿಯೇ ಆವಿಷ್ಕಾರಿ ಬದಲಾವಣೆಗಳನ್ನು ನಿರ್ಮಿಸುವ ಕಾರ್ಯವಾಗಬೇಕಿದೆ. ಈ ಹಿನ್ನಲೆಯಲ್ಲಿ ಎಐ ನಂತಹ ತಂತ್ರಜ್ಞಾನಗಳ ಮೂಲಕ ಮತ್ತಷ್ಟು ಯೋಜನೆಗಳು ಅರಳಲಿ ಎಂದು ಹೇಳಿದರು.
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಹ್ಯಾಕಥಾನ್ ಎನ್ನುವುದು ಕೇವಲ ಒಂದು ಸ್ಪರ್ಧೆಯಲ್ಲ. ಅದು ತರಗತಿಯಲ್ಲಿ ಕಲಿತ ಜ್ಞಾನವನ್ನು ನೈಜ ಜೀವನದ ಸಮಸ್ಯೆಗಳಿಗೆ ಅನ್ವಯಿಸುವ ಸೇತುವೆಯಾಗಿದೆ. ತರಗತಿ ನಿಮಗೆ ಏನು ತಿಳಿಯಬೇಕು ಎಂಬುದನ್ನು ಕಲಿಸಿದರೆ, ಹ್ಯಾಕಥಾನ್ ತಿಳಿದಿರುವ ಜ್ಞಾನವನ್ನು ಸಮಾಜದ ಒಳಿತಿಗಾಗಿ ಹೇಗೆ ಬಳಸಬೇಕು? ಎಂಬ ಮಹತ್ವದ ಪ್ರಶ್ನೆಗೆ ಉತ್ತರ ಹುಡುಕುವ ಅವಕಾಶವನ್ನು ನೀಡುತ್ತದೆ. ನಿಜವಾದ ಕಲಿಕೆ ಅಲ್ಲಿಂದಲೇ ಆರಂಭವಾಗುತ್ತದೆ.

ನೀವು ರೂಪಿಸುವ ಪ್ರತಿಯೊಂದು ಯೋಜನೆಯಲ್ಲಿಯೂ ವಿಸ್ತರಣಾ ಸಾಮರ್ಥ್ಯ, ಸಂಪನ್ಮೂಲ ಹಾಗೂ ಇಂಧನ ದಕ್ಷತೆ, ಸಾಮಾಜಿಕ ಪರಿಣಾಮ ಹೊಂದಿರಬೇಕಾಗಿರುವುದು ಅತ್ಯಂತ ಅವಶ್ಯಕವಾಗಿದೆ. ಸುಸ್ಥಿರ ಅಭಿವೃದ್ಧಿ ಇಂದು ಜಗತ್ತಿನ ಪ್ರಮುಖ ಸವಾಲಾಗಿದೆ. ಎಐ ಅಪಾರ ಅವಕಾಶಗಳನ್ನು ನೀಡಿದರೂ, ಹೆಚ್ಚಿನ ಗಣಕ ಶಕ್ತಿ ಮತ್ತು ವಿದ್ಯುತ್ ಬಳಕೆಯಿಂದ ಕಾರ್ಬನ್ ಹೆಜ್ಜೆಗುರುತನ್ನೂ ಹೆಚ್ಚಿಸುತ್ತದೆ. ಆದ್ದರಿಂದ ಭವಿಷ್ಯದ ಎಂಜಿನಿಯರ್‌ಗಳಾದ ನೀವು ಬುದ್ಧಿವಂತಿಕೆಯ ಜೊತೆಗೆ ಪರಿಸರ ಸ್ನೇಹಿ ಹಾಗೂ ಸಾಮಾಜಿಕ ಜವಾಬ್ದಾರಿಯುತ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್, ಇನ್ಫಾರ್ಮೇಷನ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಡಾ. ರಾಘವೇಂದ್ರ ಆರ್.ಜೆ, ಐಇಇಇ ಕಂಪ್ಯೂಟರ್ ಸೊಸೈಟಿ ವಿದ್ಯಾರ್ಥಿ ಘಟಕದ ಸಂಯೋಜಕರಾದ ವಿರೇಶ್.ಎಚ್.ಟಿ ಉಪಸ್ಥಿತರಿದ್ದರು. ಸಂಘಟನಾ ಸಮಿತಿಯ ಸದಸ್ಯರಾದ ಡಾ. ಪವನ್ ಕುಮಾರ್ ಎಂ.ಪಿ ಸ್ವಾಗತಿಸಿದರು. ವಿವಿಧ ರಾಜ್ಯಗಳ 150 ಕ್ಕೂ ಹೆಚ್ಚು ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: 'Yugma TechFest-2.0'AI HackathonJNNCEKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

50 ವರ್ಷಗಳ ಸಂಭ್ರಮದಲ್ಲಿ Maaza: ವಿಶೇಷ ಅಂಚೆ ಕವರ್ ಬಿಡುಗಡೆ

Next Post

ಜು.26 ಶ್ರೀ ಅನ್ನಪೂರ್ಣೇಶ್ವರಿ ಮುಷ್ಟಿ ಅಕ್ಕಿ ಯೋಜನೆ – ‘ಸ್ನೇಹ ಮಿಲನ’ ಕಾರ್ಯಕ್ರಮ

kalpa News

kalpa News

Next Post
Shri Annapurneshwari Mushti Akki Yojana

ಜು.26 ಶ್ರೀ ಅನ್ನಪೂರ್ಣೇಶ್ವರಿ ಮುಷ್ಟಿ ಅಕ್ಕಿ ಯೋಜನೆ - 'ಸ್ನೇಹ ಮಿಲನ' ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL