ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶ್ರೀ ಅನ್ನಪೂರ್ಣೇಶ್ವರಿ ಮುಷ್ಟಿ ಅಕ್ಕಿ ಯೋಜನೆ ಶಿವಮೊಗ್ಗ ಹಾಗೂ ವನವಾಸಿ ಕಲ್ಯಾಣ ಕರ್ನಾಟಕ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ‘ಸ್ನೇಹ ಮಿಲನ – 17ನೇ ವಾರ್ಷಿಕೋತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನಗರದ ರವೀಂದ್ರನಗರದಲ್ಲಿರುವ ಶ್ರೀ ಗಣಪತಿ ದೇವಸ್ಥಾನದ ಅವರಣದಲ್ಲಿ ಜು.26ರ ಭಾನುವಾರದಂದು ಬೆಳಿಗ್ಗೆ 10:30ಕ್ಕೆ ಕಾರ್ಯಕ್ರಮ ನೆರವೇರಲಿದೆ.
ಈ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಅನ್ನಪೂರ್ಣೇಶ್ವರಿ ಮುಷ್ಟಿ ಅಕ್ಕಿ ಯೋಜನೆಯ ಅಧ್ಯಕ್ಷರಾದ ಸುಮಾ ಮೂರ್ತಿ ಅವರು ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಧಾನ ಪರಿ?ತ್ ಶಾಸಕ ಶಾಂತಾರಾಂ ಸಿದ್ಧಿ, ವನವಾಸಿ ಕಲ್ಯಾಣದ ಕ್ಷೇತ್ರೀಯ ನಗರೀಯ ಕಾರ್ಯ ಪ್ರಮುಖ ಗೋಪಾಲ್ ಕೇಸರಿ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ಭಾಗವಹಿಸಲಿದ್ದಾರೆ. ರಾಜ್ಯ ನಗರೀಯ ಕಾರ್ಯ ಪ್ರಮುಖರಾದ ಭಗಿನಿ ವೇದಾವತಿ ಅವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿರಲಿದ್ದಾರೆ.
Also read>> ಸಮಾಜದ ನೈಜ ಸಮಸ್ಯೆಗಳಿಗೆ ಸ್ಪಂದಿಸುವ ಎಐ ಪರಿಹಾರಗಳನ್ನು ರೂಪಿಸಿ: ರುದ್ರೇಗೌಡ ಕರೆ
ಸಭಾ ಕಾರ್ಯಕ್ರಮದ ನಂತರ ಆಗಮಿಸಿದ ಎಲ್ಲಾ ಬಂಧುಗಳಿಗೆ ಮತ್ತು ಸಾರ್ವಜನಿಕರಿಗೆ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದ್ದು, ಪ್ರತಿಯೊಬ್ಬರೂ ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕಾಗಿ ಶ್ರೀ ಅನ್ನಪೂರ್ಣೇಶ್ವರಿ ಮುಷ್ಟಿ ಅಕ್ಕಿ ಯೋಜನೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ವಿನಂತಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










