ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮೈಸೂರು (Mysore) ನಗರದ ಟಿ.ಕೆ. ಬಡಾವಣೆಯ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಾಮಾಜಿಕ ಸೇವಾ ಕಾರ್ಯಕ್ರಮದ ಅಂಗವಾಗಿ ಜುಲೈ 26ರಂದು ಭಾನುವಾರ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಈ ಶಿಬಿರದಲ್ಲಿ ಸಾರ್ವಜನಿಕರಿಗಾಗಿ ಹೃದಯ ತಪಾಸಣೆ, ಕೀಲು ಹಾಗೂ ಮಂಡಿ ನೋವಿನ ತಪಾಸಣೆ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳು ಲಭ್ಯವಿರಲಿವೆ.
Also Read>> Kishora Deepika | ಹದಿಹರೆಯದ ಮಕ್ಕಳ ಶಿಕ್ಷಕರು, ಪೋಷಕರಿಗೆ ಮಾರ್ಗದರ್ಶಿ
Mysore | ಸಂಘಗಳ ಸಂಯುಕ್ತ ಆಶ್ರಯ
ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್, ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಕರ್ನಾಟಕ ವಿಪ್ರ ವಕೀಲರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಈ ಶಿಬಿರ ನಡೆಯಲಿದೆ.
ತಜ್ಞ ವೈದ್ಯರ ತಂಡವು ಅತ್ಯಾಧುನಿಕ ಸಾಧನಗಳ ಮೂಲಕ ಸಮಗ್ರ ಆರೋಗ್ಯ ತಪಾಸಣೆ ನಡೆಸಲಿದ್ದು, ಶಿಬಿರವು ರಾಯರ ಮಠದ ಸಭಾಂಗಣದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಠದ ಕಾರ್ಯಾಲಯವನ್ನು ಸಂಪರ್ಕಿಸಬಹುದು.
ಸಂಪರ್ಕ: ಜಯರಾಂ – 7624877477, ರಾಘು – 9964824320
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








