ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲೂಕಿನ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪ ಬಳಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವುಕಂಡಿರುವ ಘಟನೆ ನಡೆದಿದೆ.
ಮೃತರನ್ನು ಶಿವಮೊಗ್ಗ ನಗರದ ಗಾಡಿಕೊಪ್ಪ ನಿವಾಸಿ ವಿರೇಶ್ (೨೮) ಎಂದು ಗುರುತಿಸಲಾಗಿದೆ.
ಲಭ್ಯವಿರುವ ಮಾಹಿತಿಯಂತೆ, ಬೆಳಗಿನ ಜಾವ ವಿರೇಶ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿರೇಶ್ ಅವರ ತಲೆಗೆ ಗಂಭೀರ ಗಾಯಗಳಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Also read>> Shivamogga | ಕಾನೂನು ಸುವ್ಯವಸ್ಥೆ ಕುಸಿತ: ಪ್ರಿಯಾಂಕ್ ಖರ್ಗೆ ವಜಾಕ್ಕೆ ಆಗ್ರಹ
ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









