ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಮಕ್ಕಳಲ್ಲಿ ನಿರ್ದಿಷ್ಟವಾದ ಗುರಿ, ಛಲ, ಪರಿಶ್ರಮ ಹಾಗೂ ಇಚ್ಛಾಶಕ್ತಿ ಇದ್ದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಪ್ಪ ಎಸ್. ಗುಂಡಪಲ್ಲಿ ಹೇಳಿದರು.
ಸೋಮವಾರ ಪಟ್ಟಣದ ಕುಮದ್ವತಿ ಕೇಂದ್ರೀಯ ಸಭಾಂಗಣದಲ್ಲಿ ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸಂಘದ “ಉದ್ಘಾಟನಾ” ಸಮಾರಂಭ ಮತ್ತು ರಾಂಕ್ ವಿಜೇತ ಹಾಗೂ ಸಿಇಟಿ ಮತ್ತು ನೀಟ್ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಉದ್ಘಾಟನಾ ನುಡಿಗಳನ್ನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಪ್ರತಿಭಾ ಪುರಸ್ಕಾರವು ಯಶಸ್ಸಿನ ಹೆಜ್ಜೆ ಗುರುತಾಗಿದೆ. ವಿದ್ಯಾರ್ಥಿಗಳು ಓದಿನ ಜೊತೆಗೆ ಉತ್ತಮ ಹವ್ಯಾಸಗಳನ್ನು ರೂಡಿಸಿಕೊಂಡು ಸಮಾಜಮುಖಿಗಳಾಗಿ ಬೆಳೆಯಬೇಕು, ಈ ಸಂಸ್ಥೆಯು ಶಿಕ್ಷಣಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿ ದೇಶ-ವಿದೇಶಗಳಲ್ಲಿ ಅತ್ಯುನ್ನತ ಸ್ಥಾನ ಪಡೆದುಕೊಳ್ಳಲು ಸಹಕಾರಿಯಾಗಿದೆ. ಕಲಿತ ವಿದ್ಯೆಯನ್ನು ಯಾರು ಕದಿಯಲು ಸಾಧ್ಯವಿಲ್ಲ ಸರಸ್ವತಿಯನ್ನು ನೀವು ವಲಿಸಿಕೊಂಡರೆ ಲಕ್ಷ್ಮಿ ತಾನಾಗಿ ಒಲಿಯುತ್ತದೆ ನಮ್ಮ ಭವಿಷ್ಯ ನಮ್ಮ ಕೈಯಲ್ಲಿದೆ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾಗಳಲ್ಲಿ ಕಾಲ ಹರಣ ಮಾಡದೆ ಒಳ್ಳೆಯ ಶಿಕ್ಷಣದ ಜೊತೆಗೆ ಸಂಸ್ಕಾರ ಬೆಳೆಸಿಕೊಳ್ಳಿ ಎಂದು ಅವರು ತಿಳಿಸಿದರು.
2025 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ. ವರ್ಷ ಎಮ್. ಬಿ..595 ಅಂಕಗಳನ್ನು ಪಡೆದು ಜಿಲ್ಲೆಗೆ ದ್ವಿತೀಯಸ್ಥಾನ ರಾಜ್ಯಕ್ಕೆ ನಾಲ್ಕನೇ ರಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಜೆಇಇ, ನೀಟ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
Also read>> ಶಿವಮೊಗ್ಗ ಬಳಿ ಭೀಕರ ಕಾರು ಅಪಘಾತ: ದಾವಣಗೆರೆ ಮೂಲದ ವ್ಯಕ್ತಿ ಸ್ಥಳದಲ್ಲೇ ಸಾವು
ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಪ್ರತಿನಿಧಿಗಳು, ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಜಿ. ಎಸ್ ಶಿವಕುಮಾರ್ ಮಾತನಾಡಿ ಪೋಷಕರು ತಮ್ಮ ಆಸಕ್ತಿಗೆ ಅನುಗುಣವಾಗಿ ಮಕ್ಕಳನ್ನು ಬೆಳೆಸದೆ ಮಕ್ಕಳ ಇಚ್ಛಾಶಕ್ತಿಯನ್ನು ಅರಿತು ಮಕ್ಕಳನ್ನು ಬೆಳೆಸಬೇಕು ಅಂದಾಗ ವಿದ್ಯಾರ್ಥಿಗು ತಮ್ಮನ್ನು ತಾವು ಆತ್ಮಾವಲೋಕನ ಮಾಡಿಕೊಂಡು ನಿರಂತರವಾದ ಕಲಿಕೆಯಿಂದ ಯಶಸ್ಸು ಕಾಣಲು ಸಾಧ್ಯ ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ನುಡಿಗಳನ್ನು ಪ್ರಾಚಾರ್ಯ ಡಾ. ಎಂ.ವೀರೇಂದ್ರ ಮಾತನಾಡಿ, ಅತ್ಯಂತ ಕಡಿಮೆ ಖರ್ಚಿನಲ್ಲಿ ಗುಣಾತ್ಮಕ ಶಿಕ್ಷಣ ನೀಡಬೇಕೆಂಬುದು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಬಿ.ಎಸ್ ಯಡಿಯೂರಪ್ಪನವರ ಕನಸು ನನಸಾಗಿದೆ ಮತ್ತು ಈ ಸಂಸ್ಥೆಯ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.
ನಂತರ ವಿಜ್ಞಾನ ವಿಭಾಗದ ಮುಖ್ಯಸ್ಥ ಪರ್ವಿಜ್ ಅಹಮದ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಝಾನ್ಸಿ ಕಿಯಾ ಶೋರೂಮ್ ನ ವ್ಯವಸ್ಥಾಪಕರಾದ ಸುಭಾಷ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ನಾಮಫಲಕ ಹಾಕಿದರು.
ಪ್ರತಿ ವರ್ಷ ವಾಣಿಜ್ಯ ವಿಭಾಗದಲ್ಲಿ ವಿದ್ಯಾರ್ಥಿಗಳುರಾಜ್ಯಕ್ಕೆ ರಾಂಕ್ ಬರಲು ಪ್ರೇರಣೆ ನೀಡಿದ ಮುಖ್ಯಸ್ಥ ಚಂದ್ರಶೇಖರ್ ಉಪನ್ಯಾಸಕರನ್ನು ಅಭಿನಂದಿಸಿ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾದ ಉಪನಿರ್ದೇಶಕರಾದ ಚಂದ್ರಪ್ಪ ಎಸ್ ಗುಂಡಪಲ್ಲಿ ಇವರಿಗೆ ಆಡಳಿತ ಮಂಡಳಿಯಿಂದ ಫಲಪುಷ್ಪ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಕು. ಅನುಷ್ಕಾ ನಾಡಿಗ್ ಸಂಗಡಿಗರು ಪ್ರಾರ್ಥಿಸಿ, ಕು. ದಿವ್ಯಶ್ರೀ ಸ್ವಾಗತಿಸಿ, ಅನಿತಾ ಸಿ. ಕೆ. ವಂದಿಸಿ, ಕು. ಪ್ರಿಯಾಂಕ ಮತ್ತು ಸಮರ್ಥ ಆರ್.ರಾವ ರಾವ್ ನಿರೂಪಿಸಿದರು.
ವೇದಿಕೆಯಲ್ಲಿ ಪ್ರಾಚಾರ್ಯರಾದ ಡಾ. ಜಿ. ಎಸ್ .ಶಿವಕುಮಾರ್, ಕುಬೇರಪ್ಪ .ಕೆ. ಡಾ.ಎಂ.ವೀರೇಂದ್ರ, ಸುಭಾಷ್ ಬೋಧಕ-ಬೋಧಕೇತರ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮುಖ್ಯ ಅತಿಥಿ ಚಂದ್ರಪ್ಪ ಗುಂಡಪಲ್ಲಿ ಉಪ ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಶಿವಮೊಗ್ಗ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಚಾರ್ಯರಾದ, ಡಾ ಜಿ ಎಸ್.ಶಿವಕುಮಾರ್, ಕುಬೇರಪ್ಪ ಕೆ, ಸುಭಾಷ್, ಡಾ. ಎಂ.ವೀರೇಂದ್ರ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








