ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ರಾಜ್ಯ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಆರ್. ಮಂಜುನಾಥ್ ಗೌಡ ಅವರು ತಮ್ಮ ಅನುದಾನದಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಇಂದು ಲೋಕಾರ್ಪಣೆ ಮಾಡಿದರು.
ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿಗಳಲ್ಲಿ ಒಂದಾದ ಕೊಣಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ.ಕೆ. ಸರ್ಕಲ್ನಲ್ಲಿ ಆಟೋ ಚಾಲಕರ ಅನುಕೂಲಕ್ಕಾಗಿ ನಿರ್ಮಿಸಲಾದ ನೂತನ ಆಟೋ ನಿಲ್ದಾಣವನ್ನು ಉದ್ಘಾಟಿಸಿದರು. ಇದೇ ವೇಳೆ ಕೊಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಸಾರ್ವಜನಿಕರು, ರೋಗಿಗಳು ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಿರ್ಮಿಸಲಾದ ನೂತನ ಬಸ್ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದರು.
ಅದರೊಂದಿಗೆ ದೇಬ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳಲಿಮಕ್ಕಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು. ಹಾಗೆಯೇ ತ್ರಿಯಂಬಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲ್ಲತ್ತಿಯಲ್ಲಿ ನಿರ್ಮಿಸಲಾದ ನೂತನ ಬಸ್ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದರು.
Also read>> Indian Railway | ಹುಬ್ಬಳ್ಳಿ–ರಾಮೇಶ್ವರಂ ವಿಶೇಷ ರೈಲುಗಳ ಸೇವೆ ವಿಸ್ತರಣೆ
ಇದೇ ಸಂದರ್ಭದಲ್ಲಿ ದೇಮ್ಲಾಪುರ ಸರ್ಕಲ್ನಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಆಟೋ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಡುಬ ರಾಘವೇಂದ್ರ ನಂದೂರು ಅಡಿಕೆ ವ್ಯಾಪಾರಿಗಳಾದ ಕೆ ಆರ್ ಪ್ರಕಾಶ್ ಗೌಡ ಕೆ ಆರ್ ಪ್ರಸಾದ್ ಗೌಡ ಆಟೋ ಬಳಗದ ಅಧ್ಯಕ್ಷರಾದ ದೇವರಾಜ ಶೆಟ್ಟಿ , ಡಾ ಸುಂದರೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ರವೀಶ್ ಕಂಪ ಸುರೇಶ್ ಹೊಸ್ಕೇರಿ ಆದರ್ಶ್ ಹುಂಚದಕಟ್ಟೆ ಲೋಕೇಶ್ ಕರಕುಚ್ಚಿ , ಹುಲ್ಲತ್ತಿ ದಿನೇಶ್, ಸುಕೇಶ್ ಕೊಣಂದೂರು, ಕುರುವಳ್ಳಿ ನಾಗರಾಜ್, ಸಚಿನ್ ಗೌಡ ವಿಶ್ವನಾಥ್ ರಕ್ಷೀತ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










