ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿ ಇಂದು ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರು, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲೆಯ ಮುಂಚೂಣಿ ಯುವ ಹೋರಾಟಗಾರ, ಪಕ್ಷ ನಿಷ್ಠೆಯ ಸಂಘಟಕ ಕೆ. ರಂಗನಾಥ್‍ರವರು ಪಕ್ಷದ ಕಚೇರಿಯಲ್ಲಿ ಆಡಳಿತ ಕಾರ್ಯದರ್ಶಿ ಎಸ್.ಟಿ. ಹಾಲಪ್ಪನವರಿಗೆ ತಮ್ಮ ಅರ್ಜಿಯನ್ನು ಸಲ್ಲಿಸಿದರು.
ಕೆ.ರಂಗನಾಥ್ ಅವರು ಪದವೀಧರರಾಗಿದ್ದು ವಿದ್ಯಾರ್ಥಿದೆಸೆಯಲ್ಲಿಯೇ ಹೋರಾಟವನ್ನು ನಡೆಸಿದವರು. ಸಾಮಾಜಿಕ ನ್ಯಾಯದ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಕ್ಕೆ ಒಪ್ಪಿಕೊಂಡು 2004ರಲ್ಲಿಯೇ ಕಾಂಗ್ರೆಸ್ ಪಕ್ಷ ಸೇರಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ.
ಅವರು ಉತ್ತರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹಲವು ಬಾರಿ ಕೆಲಸ ಮಾಡಿದ್ದಾರೆ. ಜಿಲ್ಲಾ ಸಂಯೋಜಕರಾಗಿ ಕೆಲಸ ಮಾಡಿದ್ದಾರೆ. ರಾಹುಲ್ ಗಾಂಧಿಯವರ ಸಂದರ್ಶನ ಮಾಡಿದ್ದಾರೆ. ಭದ್ರಾ ಅಚ್ಚುಕಟ್ಟು ಪ್ರದೇಶದ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಮಹಾನಗರ ಪಾಲಿಕೆಯ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಬಿಜೆಪಿ ವಿರುದ್ಧ ನಡೆಸಿದ ಹೋರಾಟದಲ್ಲಿ ಜೈಲುವಾಸ ಕೂಡ ಅನುಭವಿಸಿದ್ದಾರೆ. ವಿವಿಧ ಸಂಘಗಳಲ್ಲಿ ಕೆಲಸ ಮಾಡಿದ್ದಾರೆ.
Also read>> Onam Festival | ಹುಬ್ಬಳ್ಳಿ–ಕೊಟ್ಟಾಯಂ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು
ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ನ ಹೆಚ್‍ಪಿ ಗಿರೀಶ್, ಟಿ.ವಿ. ರಂಜಿತ್, ಬಿ.ಲೋಕೇಶ್, ಎಸ್.ಕುಮಾರೇಶ್, ಪುಷ್ಪಕ್ ಕುಮಾರ್, ಇಂಟೆಕ್ ಮಹಿಳಾ ಅಧ್ಯಕ್ಷರಾದ ಕವಿತಾ ರಾಘವೇಂದ್ರ, ಕೆ.ಎಲ್. ಪವನ್, ಎಂ. ರಾಕೇಶ್, ಎಮ್. ರಾಹುಲ್, ಮನ್ವಿಕ್ ಜೈನ್, ಅದ್ನಾನ್, ಮಿಥುನ್, ಸೈಯದ್, ಶಮ್ಮು, ಹಾಗೂ ಪಕ್ಷದ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










